ಬೆಳ್ತಂಗಡಿ: ಅಭಾಸಾಪ ತಾಲೂಕುಮಟ್ಟದ ಅಧಿವೇಶನ ಆಮಂತ್ರಣ ಪತ್ರಿಕೆ ಬಿಡುಗಡೆ

KannadaprabhaNewsNetwork |  
Published : Nov 10, 2024, 01:49 AM IST
ಅಧಿವೇಶನ | Kannada Prabha

ಸಾರಾಂಶ

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರುಗುವ ಅಭಾಸಾಪ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಜಿರೆ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವತಿಯಿಂದ ಡಿ.22ರಂದು ನಡೆಯಲಿರುವ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು.

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರುಗುವ ಅಭಾಸಾಪ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಡಿ.22ರಂದು ತಾಲೂಕು ಅಧಿವೇಶನ ಬೆಳ್ತಂಗಡಿಯ ನರಸಿಂಹ ಘಡದ(ಗಡಾಯಿಕಲ್ಲು) ತಪ್ಪಲಿನ ‘ಬಲಿಪ ರೆಸಾರ್ಟ್’ನಲ್ಲಿ ನಡೆಯಲಿದೆ.ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ.ರಾಮಕೃಷ್ಣ ಶಾಸ್ತ್ರಿ, ಅಧಿವೇಶನದ ತಯಾರಿಗಳ ಕುರಿತು ಹರ್ಷ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಭಾಸಾಪ ಬೆಳ್ತಂಗಡಿ ಸಮಿತಿ ಅಧ್ಯಕ್ಷ ಪ್ರೊ.ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಸುಭಾಷಿಣಿ, ಕೋಶಾಧಿಕಾರಿ ಕೇಶವ ಭಟ್ ಅತ್ತಾಜೆ, ಸಹ ಕಾರ್ಯದರ್ಶಿ ವಿನುತಾ ರಜತ್ ಗೌಡ, ಉಪಾಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ, ವಿದ್ಯಾರ್ಥಿ ಪ್ರಕಾರ ಪ್ರಮುಖ್ ಮಹಾಬಲ ಗೌಡ, ವಿಭಾಗ ಸಂಯೋಜಕ ಸುಂದರ ಶೆಟ್ಟಿ ಇಳಂತಿಲ, ಶಿವಪ್ರಸಾದ್ ಸುರ್ಯ ಮೊದಲಾದವರು ಉಪಸ್ಥಿತರಿದ್ದರು.

-----------------------

ಕನ್ನಡ ಭಾಷೆ ಉಳಿಸಿ, ಬೆಳೆಸುವಲ್ಲಿ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ: ಡಾ.ಹೆಗ್ಗಡೆಕನ್ನಡಪ್ರಭ ವಾರ್ತೆ ಬೆಳ್ತಂಗಡಿಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ ೮೭ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾರೈಸಿದರು.ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿದ ಹೆಗ್ಗಡೆ, ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಡಾ. ಹಂಪನಾ ನೇತೃತ್ವದಲ್ಲಿ ೫೧ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿರುವುದನ್ನು ಸ್ಮರಿಸಿದರು.ಕನ್ನಡ ಭುವನೇಶ್ವರಿ ರಥಯಾತ್ರೆ ಸುಗಮವಾಗಲಿ ಎಂದು ಹಾರೈಸಿದ ಹೆಗ್ಗಡೆ, ಕನ್ನಡ ಸಾಹಿತ್ಯ ಸಮ್ಮೇಳನವು ನಾಡು, ನುಡಿ ಮತ್ತು ಸಂಸ್ಕೃತಿ ಬಗ್ಗೆ ಅಭಿಮಾನ, ಅರಿವು ಹಾಗೂ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.ಡಿ. ಹರ್ಷೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ದೇವಳ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ