ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿಯ 2023- 24ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿಯ 2023- 24ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿ, ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಎಲ್ಲ ಶಾಲೆಗಳಲ್ಲಿಯೂ ಸ್ಕೌಟ್ಸ್ ಗೈಡ್ಸ್ ದಳಗಳು ಪ್ರಾರಂಭವಾಗಿ, ಚಟುವಟಿಕೆಗಳು ನಡೆಯಬೇಕು. ಉತ್ತಮ ಗುಣ, ಶಿಸ್ತು, ಸಮಾಜವನ್ನು ಎದುರಿಸುವ ಗುಣ ಮಕ್ಕಳಲ್ಲಿ ಹುಟ್ಟಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬೆಳ್ತಂಗಡಿಯಲ್ಲಿ ಸ್ಕೌಟ್ ಭವನದ ನಿರೀಕ್ಷೆಯು ನಮ್ಮದಾಗಿದೆ. ಶಾಸಕ ಹರೀಶ್ ಪೂಂಜ ಸ್ಕೌಟ್ಸ್ ಗೈಡ್ಸ್ ಭವನಕ್ಕೆ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದರು.ರಾಜ್ಯ ಸಂಸ್ಥೆಯಿಂದ ನೀಡಲ್ಪಟ್ಟ ವಾರ್ಷಿಕ ವರದಿ ಪುಸ್ತಕವನ್ನು ಅಧ್ಯಕ್ಷತೆ ವಹಿಸಿದ್ದ ಶಾಸಕ ಪೂಂಜ ಬಿಡುಗಡೆಗೊಳಿಸಿ, ಮಕ್ಕಳು ಸಾವಯವಯುಕ್ತವಾದ ತರಕಾರಿಗಳನ್ನು ಮನೆಯಲ್ಲಿ ಬೆಳೆಸಿ, ಬಳಸುವ ಸಂಕಲ್ಪವನ್ನುಮಾಡಬೇಕಾಗಿದೆ ಎಂದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಸಿದ್ದಲಿಂಗ ಸ್ವಾಮಿ, ಪ್ರೌಢಶಾಲಾ ಶಿಕ್ಷಕರ ಅಧ್ಯಕ್ಷ ರಾಧಾಕೃಷ್ಣ, ಜಿಲ್ಲಾ ಸಹಾಯಕ ಆಯುಕ್ತ ವಿಠಲ್ ಶೆಟ್ಟಿ, ಬಿ.ಸೋಮಶೇಖರ್ ಶೆಟ್ಟಿ, ರಾಜ್ಯ ಸಹಾಯಕ ಸಂಘಟಕ ಭರತ್ ರಾಜ್ ಕೆ ಉಪಸ್ಥಿತರಿದ್ದರು.
2023-24 ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವರದಿಯನ್ನು ಕಾರ್ಯದರ್ಶಿ ಪ್ರಮೀಳಾ, ಲೆಕ್ಕಪತ್ರವನ್ನು ಕೋಶಾಧಿಕಾರಿ ಬೆಳಿಯಪ್ಪ ಕೆ. ಮಂಡಿಸಿದರು.
ದ್ವಿತೀಯ ಪಿಯುಸಿಯಲ್ಲಿ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕಗಳಿಸಿದ ಸ್ಕೌಟ್ಸ್ ಗೈಡ್ಸ್ ಹಾಗೂ ರೋವರ್ ರೇಂಜರ್ಸ್‌ಗಳನ್ನು ಸನ್ಮಾನಿಸಲಾಯಿತು.ರೋವರ್ ಸ್ಕೌಟ್ ಲೀಡರ್ ಲಕ್ಷ್ಮೀಶ ನಿರೂಪಿಸಿದರು. ಅಧ್ಯಕ್ಷ ಎಚ್.ಪದ್ಮ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.