ಬೆಳ್ತಂಗಡಿ: ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್‌ ಪ್ರತಿಭಟನಾ ಸಭೆ

KannadaprabhaNewsNetwork |  
Published : Jul 04, 2024, 01:12 AM IST
111 | Kannada Prabha

ಸಾರಾಂಶ

ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಗ್ಯಾಸ್ ಸ್ಟೌ ಮೂಲಕ ಬಿಜಿಪಿ ಕಾರ್ಯಕರ್ತೆಯರು ಮಾಡಿದ ಬ್ಲ್ಯಾಕ್‌ ಟೀಯನ್ನು ಸತೀಶ್ ಕುಂಪಲ, ಹರೀಶ್ ಪೂಂಜ ಹಾಗೂ ಹರಿಕೃಷ್ಣ ಬಂಟ್ವಾಳ ಸವಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ರೈತ ಮೋರ್ಚಾದ ನೇತೃತ್ವದಲ್ಲಿ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ಸಭೆ ಮಂಗಳವಾರ ತಾಲೂಕು ಆಡಳಿ ಸೌಧದ ಮುಂಭಾಗದಲ್ಲಿ ನಡೆಯಿತು.

ಬಳಿಕ ರಾಜ್ಯ ಸರ್ಕಾರಕ್ಕೆ ಹಾಲಿನ ದರ ಏರಿಕೆಯನ್ನು ಹಿಂಪಡೆಯಲು ಹಾಗೂ ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆಗೆ ಗೊಳಿಸುವಂತೆ ಉಪತಹಸೀಲ್ದಾರ್ ರವಿಕುಮಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಅವರು ವಿರೋಧ ಪಕ್ಷದ ನಾಯಕನಾಗಿ ಕಳಂಕ ತರುವ ಕೆಲಸ ಮಾಡಿದ್ದಾರೆ, ಅವರು ಹಿಂದೂ ಸಮಾಜಕ್ಕೆ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ಅಪನಂಬಿಕೆಯ ಸರ್ಕಾರ. ಕಾಂಗ್ರೆಸಿನ ಶಾಸಕರು, ಮಂತ್ರಿಗಳು ಸಿಎಂ ಅಥವಾ ಡಿಸಿಎಂ ಅವರಲ್ಲಿ ಯಾರನ್ನು ನಂಬೇಕು ಎನ್ನುವ ಪರಿಸ್ಥಿತಿಯಲ್ಲಿದ್ದಾರೆ. ಜನನ- ಮರಣ ಪತ್ರಕ್ಕೂ ಬೆಲೆ ಏರಿಸಿದೆ. ಬಿಜೆಪಿ ಶಾಸಕರಿರುವ ಕ್ಷೇತ್ರಗಳ ಭಾಗಗಕ್ಕೆ ಅನುದಾನ ನೀಡುತ್ತಿಲ್ಲ. ಪಂಚ ಗ್ಯಾರಂಟಿಯ ಯೋಜನೆಯಲ್ಲಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ತೆರಿಗೆ ಹೆಚ್ಚಿಸುವ ಮೂಲಕ ಜನತೆಗೆ ಬರೆ ಎಳೆದಿದೆ. ಮಾಜಿ ಸಿಎಂ ಬೊಮ್ಮಾಯಿ ಅವರು ರೈತರ ಮಕ್ಕಳಿಗೆ ರೈತನಿಧಿ ಯೋಜನೆ ರೂಪಿಸಿದ್ದರು. ಆದರೆ ಕಾಂಗ್ರೆಸ್‌ ಸರ್ಕಾರ ರೈತನಿಧಿಯನ್ನು ತೆಗೆದು ಹಾಕಿದೆ. ಪಿಎಂ ಕಿಸಾನ್ ಸನ್ಮಾನ್ ಯೋಜನೆಗೆ ರಾಜ್ಯ ಸರ್ಕಾರ ೪ ಸಾವಿರ ರುಪಾಯಿ ರೈತರಿಗೆ ನೀಡಿದ್ದನ್ನೂ ಹಿಂಪಡೆದಿದೆ. ಭೂಸಿರಿ ಯೋಜನೆಯನ್ನು ಕೂಡ ಹಿಂಪಡೆದಿದೆ ಎಂದರು. ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ನಾವೂರ ಪ್ರಾಸ್ತವಿಕವಾಗಿ ಮಾತನಾಡಿ, ಗ್ಯಾರಂಟಿ ಯೋಜನೆ ಮೂಲಕ ಅಧಿಕಾರಕ್ಕೆ ಬಂದ ಸರ್ಕಾರ ಬೆಲೆ ಏರಿಕೆ ಮಾಡವ ಮೂಲಕ ರೈತಾಪಿ ವರ್ಗವನ್ನು ಪಾತಳಕ್ಕೆ ಕೊಂಡುಯ್ಯೂವ ಕೆಲಸ ಮಾಡುತ್ತಿದೆ. ಜಿಲ್ಲೆಯ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಮಂಗಳೂರು ಮಹಾನಗರ ಪಲಿಕೆಯ ಮೇಯರ್ ಸುಧೀರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರೆಮಾನಂದ ಶೆಟ್ಟಿ, ಮಹಿಳಾ ಮೋರ್ಚಾದ ಮಂಜುಳಾ ರಾವ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಮುಖರಾದ ಗಣೇಶ್ ಪುತ್ರನ್, ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕುಶಲಾಪ್ಪ ಗೌಡ ಪೂವಾಜೆ, ಬಿಜೆಪಿ ಕಿಯೋನಿಕ್ಸ್ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್, ಬೆಳ್ತಂಗಡಿ ಮಂಡಲ ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿನೇಶ್ ಚಾರ್ಮಾಡಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಶಶಿಧರ್ ಕಲ್ಮಂಜ, ಜಿಲ್ಲೆಯ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು. ಪ್ರತಿಭಟನಾಕಾರರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಗ್ಯಾಸ್ ಸ್ಟೌ ಮೂಲಕ ಬಿಜಿಪಿ ಕಾರ್ಯಕರ್ತೆಯರು ಮಾಡಿದ ಬ್ಲ್ಯಾಕ್‌ ಟೀಯನ್ನು ಸತೀಶ್ ಕುಂಪಲ, ಹರೀಶ್ ಪೂಂಜ ಹಾಗೂ ಹರಿಕೃಷ್ಣ ಬಂಟ್ವಾಳ ಸವಿದರು.

ಸುಳ್ಯ, ಮೂಡುಬಿದ್ರೆ, ಪುತ್ತೂರು, ಬಂಟ್ವಾಳ, ಮಂಗಳೂರು, ಮಂಗಳೂರು ಉತ್ತರ ಮತ್ತು ದಕ್ಷಿಣ, ಬೆಳ್ತಂಗಡಿ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು.

PREV

Latest Stories

ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?
ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ
ಸಹನೆ, ತಾಳ್ಮೆ, ನೈತಿಕತೆಯಿಂದ ಯಶಸ್ಸು ಸಾಧ್ಯ