ದೋಸೆ ಹಬ್ಬ ಹಿಂದೂ ಸಮಾಜವನ್ನು ಒಗ್ಗೂಡಿಸಲು ಮಹತ್ವದ ಕಾರ್ಯ: ಚೌಟಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಸೋಮವಾರ ಬೆಳಗ್ಗೆ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಾರ್ವಜನಿಕವಾಗಿ ದೀಪಾವಳಿಯನ್ನು ದೋಸೆ ಹಬ್ಬದ ಮೂಲಕ ಆಚರಿಸಬಹುದು ಎಂಬುದನ್ನು ಬೆಳ್ತಂಗಡಿಯ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಾಡಿ ತೋರಿಸಿದ್ದಾರೆ. ದೋಸೆ ಹಬ್ಬ ಹಿಂದೂ ಸಮಾಜವನ್ನು ಒಗ್ಗೂಡಿಸುವ ಹಾಗೂ ನಮ್ಮ ಸಂಸ್ಕೃತಿಯನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದರು.ದೊಡ್ಡಬಳ್ಳಾಪುರ ಶಾಸಕ ಹಾಗೂ ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ದೋಸೆ ಹಬ್ಬ ಉದ್ಘಾಟಿಸಿ, ಆರ್‌ಎಸ್‌ಎಸ್ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ. ಅವರು ಒಮ್ಮೆ ಸಂಘದ ಕಾರ್ಯಕ್ರಮಕ್ಕೆ ಬಂದರೆ ಅವರ ತಪ್ಪು ಕಲ್ಪನೆ ಹೋಗಬಹುದು ಎಂದರು.
ಶಾಸಕ ಹರೀಶ್ ಪೂಂಜ ಸ್ವಾಗತಿಸಿ, ದೋಸೆ ಹಬ್ಬದ ಉದ್ದೇಶವನ್ನು ವಿವರಿಸಿದರು.ಎಂಎಲ್‌ಸಿ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಂದೀಪ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಉಡುಪಿ ಜಿಲ್ಲಾ ಯುವಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ಅವಿನಾಶ್ ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪಪಂ ಅಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪ್ರಮುಖರಾದ ವಿನಿತ್ ಕೋಟ್ಯಾನ್, ಗಣೇಶ್ ಲಾಯಿಲ, ಜಯಪ್ರಕಾಶ್ ಕಡಮಾಜೆ, ಗಣೇಶ್ ಗೌಡ, ಸೀತರಾಮ ಬೆಳಾಲ್, ಶರತ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ದ.ಕ. ಜಿಲ್ಲಾಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ, ಮಕ್ಕಳ ಹುಲಿವೇಷ ಸ್ಪರ್ಧೆ, ಬಾಲೆ ಪಿಲಿ, ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ಭಜರಂಗ ಬಲಿ ನಾಟಕ ಪ್ರದರ್ಶನ ಜರುಗಿತು.
---------ನಮೋ ಮ್ಯಾರಥಾನ್ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಆಚರಣೆಯ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆಗಳ ಬಳಿಯಿಂದ ನಮೋ ಮ್ಯಾರಾಥಾನ್ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರು ಭಾಗವಹಿಸಿದ್ದರು.------------ನಿರಂತರ ದೋಸೆ ಸೇವನೆಗೆ ಅವಕಾಶಬೆಳಗ್ಗೆಯಿಂದ ರಾತ್ರಿ ವರೆಗೆ ದೋಸೆ ಹಬ್ಬಕ್ಕೆ ಬಂದವರೆಲ್ಲರಿಗೂ ಅನಿಯಮಿತವಾಗಿ ಮತ್ತು ನಿರಂತರವಾಗಿ ದೋಸೆ ಸೇವಿಸಲು ಅವಕಾಶ ನೀಡಲಾಗಿತ್ತು. ಕುಡಿಯಲು ಚಹಾ, ನೀರಿನ ವ್ಯವಸ್ಥೆ ಮಾಡಲಾಗಿತ್ತು.