ಬೆಳ್ತಂಗಡಿ ಸರ್ಕಾರಿ ಸಮುದಾಯ ಆಸ್ಪತ್ರೆ ರಕ್ಷಾ ಸಮಿತಿ ಸಭೆ

KannadaprabhaNewsNetwork |  
Published : Jul 18, 2025, 12:51 AM IST
ಆರೋಗ್ಯ | Kannada Prabha

ಸಾರಾಂಶ

ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಮೂಲಭೂತ ಸೌಕರ್ಯಗಳಿಗೆ ಸರ್ಕಾರದಿಂದ ಅನುದಾನ ಪಡೆಯಲು ಅಂದಾಜು ಪಟ್ಟಿ ತಯಾರಿಸುವಂತೆ ಸಭೆಯಲ್ಲಿ ತಿಳಿಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಇಲ್ಲಿನ ಬೆಳ್ತಂಗಡಿ ಸರ್ಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ನಡೆಯಿತು.ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ನಗರ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ವೈದ್ಯಾಧಿಕಾರಿ ಡಾ.ರಮೇಶ್ , ಆರೋಗ್ಯಾಧಿಕಾರಿ ಡಾ.ಸಂಜಾತ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಂಕಪ್ಪ, ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ಡಾ.ಶಶಿಕಾಂತ್ ಡೋಂಗ್ರೆ, ಡಾ.ಶಶಾಂಕ್,

ಡಾ.ತಾರಕೇಶ್ವರಿ, ಡಾ.ಆಶಾಲತಾ, ಡಾ.ಹೇಮಲತಾ, ಡಾ.ರಶ್ಮಿ ಇದ್ದರು.

ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಮೂಲಭೂತ ಸೌಕರ್ಯಗಳಿಗೆ ಸರ್ಕಾರದಿಂದ ಅನುದಾನ ಪಡೆಯಲು ಅಂದಾಜು ಪಟ್ಟಿ ತಯಾರಿಸುವಂತೆ ಸಭೆಯಲ್ಲಿ ತಿಳಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಔಷಧ ಸರಿಯಾದ ರೀತಿಯಲ್ಲಿ ಉಪಯೋಗಿಸಲು ಬರೆದು ಮಾಹಿತಿ ನೀಡುವಂತೆ ತಿಳಿಸಲಾಯಿತು .ಕೊರತೆ ಇರುವ ಔಷಧವನ್ನು ಇಲಾಖೆಯಿಂದ ತಕ್ಷಣ ತರಿಸುವಂತೆ ಹೇಳಿದರು. ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ವಾಹನವನ್ನು ನಿಲ್ಲಿಸುವುದರಿಂದ ತೊಂದರೆ ಆಗುತ್ತಿದೆ ಕೂಡಲೇ ಕ್ರಮ ವಹಿಸುವಂತೆ ತಿಳಿಸಿದರು.

ಒಳರೋಗಿ ಮತ್ತು ಹೊರರೋಗಿಗಳಿಗೆ ಪ್ರತ್ಯೇಕ ಕೌಂಟರ್ ಮಾಡುವಂತೆ ಸಭೆಯಲ್ಲಿ ಸದಸ್ಯರು ತಿಳಿಸಿದರು. ಆಸ್ಪತ್ರೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕೆಂದು ತಿಳಿಸಿದರು.

ರಕ್ಷಾ ಸಮಿತಿ ಸದಸ್ಯರಾದ ನವೀನ್ ಗೌಡ ಸವಣಾಲು, ಸೆಬಾಸ್ಟಿಯನ್ ಪಿ.ಟಿ., ವೆಂಕಣ್ಣ ಕೊಯ್ಯೂರು, ವೀರೆಂದ್ರ ಕುಮಾರ್ ಜೈನ್, ಅಬ್ದುಲ್ ರಶೀದ್ ಕಕ್ಕಿಂಜೆ, ಸ್ಟೀವನ್ ಮೋನಿಸ್, ಶ್ರೀಮತಿ ಸವಿತಾ ಸುಲ್ಕೇರಿ, ಆರೋಗ್ಯಾಧಿಕಾರಿ ಕಛೇರಿಯ ಸಿಬ್ಬಂದಿ ಅಜಯ್ ಕಲ್ಲೇಗಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ