ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕೆಎಸ್‌ಎಂಸಿಎ ನಿರ್ದೇಶಕ ಆದರ್ಶ್ ಜೋಸೆಫ್, ಕಾಡುಪ್ರಾಣಿಗಳ ಹಾವಳಿಯಿಂದಾಗಿ ಕೃಷಿಕರು ಬದುಕಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ಕಾಡಾನೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕೃಷಿಕರು ನೋಟಾ ಚಳವಳಿಯಂತಹ ದಾರಿ ಅನುಸರಿಸಬೇಕಾಗಿ ಬರಲಿದೆ ಎಂದು ಎಚ್ಚರಿಸಿದರು.
ಕೆ.ಎಸ್.ಎಂ.ಸಿ.ಎ. ಅಧ್ಯಕ್ಷ ಬಿಟ್ಟಿ ನೆಡುನಿಲಂ ಮಾತನಾಡಿ, ಬೆಳ್ತಂಗಡಿ ತಾಲೂಕಿನ ಮಲೆನಾಡಿನ ಭಾಗಗಳಲ್ಲಿ ಕಾಡಾನೆ ಹಾವಳಿ ತೀರಾ ಹೆಚ್ಚಾಗಿದೆ. ಕೃಷಿಕರು ತಮ್ಮ ತೋಟಗಳಿಗೆ ತೆರಳಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಒಬ್ಬ ಕೃಷಿಕ ಆನೆ ದಾಳಿಗೆ ಬಲಿಯಾಗಿದ್ದಾರೆ. ಆನೆಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಚಿಂತಕ ಲಕ್ಷ್ಮೀಶ ಗಬ್ಲಡ್ಕ ಮಾತನಾಡಿದರು. ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ವಲಯ ಅರಣ್ಯಾಧಿಕಾರಿ ಕಾಡಾನೆ ಸಮ್ಯೆಗೆ ಕೂಡಲೇ ಸ್ಪಂದಿಸಲಾಗುತ್ತಿದೆ. ಆನೆಗಳು ಬರದಂತೆ ತಡೆಯುವ ನಿಟ್ಟಿನಲ್ಲಿ ಆನೆ ಕಂದಕ ಸೇರಿದಂತೆ ಎಲ್ಲ ವಿಧಾನಗಳನ್ನು ಇಲ್ಲಿ ಮಾಡಲಾಗುತ್ತಿದೆ. ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬ ಗುರಿಯೊಂದಿಗೆ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಮೆರವಣಿಗೆ ಆರಂಭಿಸಿ ಮೂರುಮಾರ್ಗದ ಮೂಲಕ ಬೆಳ್ತಂಗಡಿ ಅರಣ್ಯ ಇಲಾಖೆಯ ಕಚೇರಿಯವರೆಗೆ ಮೆರವಣಿಗೆ ಯಲ್ಲಿ ಬಂದ ಸಂತ್ರಸ್ತರು ಮನವಿ ಸಲ್ಲಿಸಿದರು. ಪ್ರತಿಭಟನೆ ನೇತೃತ್ವವನ್ನು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ, ಪಿ.ಆರ್.ಒ ಸೆಬಾಸ್ಟಿಯನ್ನ ಪಿ.ಸಿ ಯುವ ಘಟಕದ ಸಂಚಾಲಕ ರೋಬಿನ್ ಓಡಂಪಳ್ಳಿ, ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ, ಧರ್ಮಗುರುಗಳಾದ ಫಾ ರಿಜೊ, ಫಾ. ಥಾಮಸ್, ಫಾ. ಜೋಸೆಫ್, ಮುಖಂಡರುಗಳಾದ ಕ್ಸೇವಿಯರ್ ಪಾಲೇಲಿ, ಕೇಶವ ಪಿ ಬೆಳಾಲು, ದೇವಸ್ಯ ಟಿ.ವಿ ಧರ್ಮಸ್ಥಳ, ರೋಯಿ ಪುದುವೆಟ್ಟು, ಪ್ರದೀಪ್ ಕೆ.ಸಿ ರೆಜಿ, ಹಾಗೂ ಇತರರು ಇದ್ದರು.