9 ಲಕ್ಷ ರು.ಗೂ ಅಧಿಕ ಮೊತ್ತದ ದುರಸ್ತಿ ಕಾರ್ಯ । ರೋಟರಿ ಸಂಸ್ಥೆ ಸಹಯೋಗದ ಕಾರ್ಯ
ಕನ್ನಡಪ್ರಭ ವಾರ್ತೆ ಬೆಳ್ತಂಗಡಿಬೆಳ್ತಂಗಡಿ ತಾಲೂಕು ಪಶು ಆಸ್ಪತ್ರೆ ಹಲವು ದಶಕಗಳ ಹಿಂದೆ ನಿರ್ಮಿತವಾಗಿರುವುದರಿಂದ ಆಸ್ಪತ್ರೆಯ ತುರ್ತು ಶಸ್ತ್ರ ಚಿಕಿತ್ಸೆಯ ಕೊಠಡಿ ಶಿಥಿಲಾವಸ್ಥೆ ತಲುಪಿತ್ತು. ಇದರ ನವೀಕರಣ ಮತ್ತು ಸುಸಜ್ಜಿತವಾದ ವ್ಯವಸ್ಥೆ ಕಲ್ಪಿಸಿಕೊಡಲು ಮುಂದಾದ ಬೆಳ್ತಂಗಡಿ ರೋಟರಿ ಸಂಸ್ಥೆಯು, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಮತ್ತು ಬೆಂಗಳೂರಿನ ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಕಾರದೊಂದಿಗೆ ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಸುಮಾರು 9 ಲಕ್ಷ ರು.ಗೂ ಅಧಿಕ ಮೊತ್ತದಲ್ಲಿ ಸಂಪೂರ್ಣ ನವೀಕರಣಗೊಂಡಿದೆ.
ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ತಾಲೂಕು ಪಶು ಆಸ್ಪತ್ರೆಯ ವಠಾರದಲ್ಲಿ ನಡೆಯಿತು.ಜಿಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜಗದೀಶ್ ಮುಗುಳಿ ಮತ್ತು ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ಸುಪ್ರಿಯಾ ನವೀಕೃತ ಆಪರೇಷನ್ ಥಿಯೇಟರ್ ಉದ್ಘಾಟಿಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ಡಾ. ಅರುಣ್ ಕುಮಾರ್ ಶೆಟ್ಟಿ ಉಪ ನಿರ್ದೇಶಕರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರು, ಡಾ. ಶಿವಣ್ಣ ಜಂಟಿ ನಿರ್ದೇಶಕರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರು ಮತ್ತು ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ಇದ್ದರು.
ದೀಪ ಬೆಳಗಿಸಿ ಮಾತಾಡಿದ ಶಾಸಕ ಹರೀಶ್ ಪೂಂಜ, ಒಂದು ಸರ್ಕಾರಿ ಪಶು ವೈದ್ಯಕೀಯ ಚಿಕಿತ್ಸಾಲಯವನ್ನು ಸಂಘ ಸಂಸ್ಥೆಯೊಂದು ಅಭಿವೃದ್ಧಿ ಪಡಿಸಿರುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮೊದಲ ಉದಾಹರಣೆ ಎಂದರು.ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ಸುಪ್ರಿಯಾ ಖಾಂಡರಿ, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರಿನ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಮಾತನಾಡಿದರು.
ಜಿಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜಗದೀಶ್ ಮುಗುಳಿ, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರಿನ ಅಧ್ಯಕ್ಷೆ ಸುಪ್ರಿಯಾ ಖಾಂಡರಿ, ಕಾರ್ಯದರ್ಶಿ ನರಸಿಂಹನ್ ಕಣ್ಣನ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್ ಅವರನ್ನು ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಬೆಳ್ತಂಗಡಿ ತಾಲೂಕಿ ಪಶು ಪಾಲನಾ ಆಸ್ಪತ್ರೆಯ ವತಿಯಿಂದ ಸನ್ಮಾನಿಸಲಾಯಿತು.ತಾಲೂಕಿನ ಹಿರಿಯ ವಕೀಲ ಧನಂಜಯ ರಾವ್ ನಿರೂಪಿಸಿದರು. ತಾಲೂಕು ಪಶು ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ವಂದಿಸಿದರು.