ಉಜಿರೆಯ ಎಸ್ ಡಿಎಂಸಿ ಎನ್ ವೈಎಸ್ ರತ್ನಮ್ಮ ಸಭಾಭವನದಲ್ಲಿ ಜರಗಿದ ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ, ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ
ಬೆಳ್ತಂಗಡಿ: ಮಕ್ಕಳು ಉತ್ತಮ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪೋಷಕರಿಗೆ ಕೃತಜ್ಞರಾಗಿರಬೇಕು. ಮಕ್ಕಳು ಮೊಬೈಲ್ ಗೀಳಿನಿಂದ ಹೊರಬರಲು ಶಿಬಿರಗಳು ಪೂರಕ. ಶಿಬಿರಗಳು ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಭಾರತ ಸ್ಕೌಟ್ಸ್ ಅಂಡ್ ಗೈಡ್ ನ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಹೇಳಿದರು.
ಸೋಮವಾರ ಉಜಿರೆಯ ಎಸ್ ಡಿಎಂಸಿ ಎನ್ ವೈಎಸ್ ರತ್ನಮ್ಮ ಸಭಾಭವನದಲ್ಲಿ ಜರಗಿದ ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ, ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಎಸ್ ಡಿ ಎಂ ಸಿಎನ್ ವೈ ಕಾಲೇಜಿನ ಪ್ರಿನ್ಸಿಪಾಲ್ ಡಾ.ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಬಿರದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು.ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ್ ಭಟ್, ಜಿಲ್ಲಾ ಗೈಡ್ ಆಯುಕ್ತೆ ವಿಮಲಾ ರಂಗಯ್ಯ, ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ವಿಠ್ಠಲ ಶೆಟ್ಟಿ, ಜಿಲ್ಲಾ ಸಹಾಯಕ ಆಯುಕ್ತ ಬಿ.ಸೋಮಶೇಖರ್ ಶೆಟ್ಟಿ, ಶಿಬಿರ ನಿರ್ದೇಶಕ ಡಾ.ರವಿ ಎಂ.ಎನ್., ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಉಪಸ್ಥಿತರಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಹಾಗೂ ಎಸ್ ಡಿ ಯಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಇವರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಮೇ 8ರವರೆಗೆ ಜರಗಲಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.