ಭಗವಂತನ ಸೇವೆ ಮೂಲಕ ಪಾಪ ಕರ್ಮ ದೂರ: ಧರ್ಮಪಾಲನಾಥ ಶ್ರೀ

KannadaprabhaNewsNetwork |  
Published : Mar 09, 2026, 02:45 AM IST
ಯಾರಿಗೂ  | Kannada Prabha

ಸಾರಾಂಶ

ಉಜಿರೆ ಶ್ರೀ ಜನಾರ್ದ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಸುದರ್ಶನ ಸಭಾಭವನದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ

ಬೆಳ್ತಂಗಡಿ: ಯಾವಾಗ ಏನು ನಡೆಯಬೇಕು, ಅದು ಭಗವಂತನ ಇಚ್ಛೆಯಂತೆ ನಡೆದೆ ನಡೆಯುತ್ತದೆ. ಇದು ಯಾರಿಗೂ ಹೊರತಲ್ಲ. ಜೀವನದಲ್ಲಿ ಹೆಚ್ಚು ಚಿಂತಿಸದೆ, ದೇವರನ್ನು ನೆನೆಯುವ ಮೂಲಕ ಮುಂದುವರಿಯಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಧರ್ಮ ಪಾಲನಾಥ ಸ್ವಾಮೀಜಿ ಹೇಳಿದರು.

ಅವರು ಶನಿವಾರ ಉಜಿರೆ ಶ್ರೀ ಜನಾರ್ದ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಸುದರ್ಶನ ಸಭಾಭವನದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರುಅಧ್ಯಕ್ಷತೆ ವಹಿಸಿದ್ದ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಸನಾತನ ಪರಂಪರೆಯಲ್ಲಿ ಸಾಧುಗಳಿಗೆ ಅತಿ ದೊಡ್ಡ ಸ್ಥಾನಮಾನ ಇದೆ. ಆಧ್ಯಾತಿಕ ಪರಂಪರೆಯಲ್ಲಿ ದೇವರು ಬೇರೆ, ಬೇರೆ ರೀತಿಗಳಲ್ಲಿ ಸೂಚನೆ ನೀಡುತ್ತಾನೆ ಎಂದರು.

ಆರಿಕೋಡಿ ಚಾಮುಂಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಮಾತನಾಡಿ ಕರಾವಳಿಯಲ್ಲಿ ಪ್ರಕೃತಿಯನ್ನು ಆರಾಧಿಸುವ ಜನರು ಪ್ರಕೃತಿಯಲ್ಲಿ ದೇವರನ್ನು ಕಾಣುತ್ತಾರೆ ಎಂದರು.ಶಾಸಕ ಹರೀಶ್ ಪೂಂಜ, ಉಜಿರೆ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಐಟಿ ವಿಭಾಗದ ಸಿಇಒ ಪೂರನ್ ವರ್ಮ, ವಕೀಲ ಬಿ.ಕೆ.ಧನಂಜಯ ರಾವ್, ಉಜಿರೆ ಕಾಲಭೈರವೇಶ್ವರ ಒಕ್ಕಲಿಗರ ಸಹಕಾರ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಬೆಳ್ತಂಗಡಿ ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಡಾ. ನವೀನ್ ಕುಮಾರ್ ಜೈನ್, ಉಜಿರೆ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಶಶಿಕಲಾ ದೇವಪ್ಪ ಗೌಡ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಬ್ರಹ್ಮ ಕಲಶೋತ್ಸವದ ಸಮಿತಿಯ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಇದ್ದರು.

ರಾಜಗೋಪುರ ನಿರ್ಮಾಣ ಸಮಿತಿಯ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಸುರಭಿ ಸ್ವಾಗತಿಸಿದರು. ಉಪನ್ಯಾಸಕ ದೀಕ್ಷಿತ್ ರೈ ಕಾರ್ಯಕ್ರಮ ನಿರೂಪಿಸಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಶಿವಪ್ರಸಾದ್ ಸುರ್ಯ ವಂದಿಸಿದರು.ಜಗಡೊಡೆಯ ಜನಾರ್ದನ ಮತ್ತು ನಂದಾದೀಪ ಧ್ವನಿ ಸುರುಳಿಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು.ಇಂದಿನ ಕಾರ್ಯಕ್ರಮ: ಬೆಳಿಗ್ಗೆ 6 ಗಂಟೆಯಿಂದ ವೈದಿಕ ವಿಧಿ ವಿಧಾನಗಳು, ಅಂಕುರ ಪೂಜೆ, ಬ್ರಹ್ಮ ಕಲಶ ಮಂಡಲ ರಚನೆ , ರುದ್ರ ಯಾಗ ಹಾಗೂ ಇನ್ನಿತರ ಕಾರ್ಯಕ್ರಮಗಳು ಜರಗಲಿವೆ. ಸಂಜೆ 4:30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಆಶೀರ್ವಚನ ನೀಡುವರು. ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಅಧ್ಯಕ್ಷತೆ ವಹಿಸುವರು. ಅಧ್ಯಕ್ಷ ಕೆ.ಪ್ರತಾಪ ಸಿಂಹ ನಾಯಕ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರ ಕುಮಾರ್, ಶಾಸಕರಾದ ವಿ.ಸುನಿಲ್ ಕುಮಾರ್, ಗುರುರಾಜ ಗಂಟಿಹೊಳೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾಲಭೈರವ ಒಕ್ಕಲಿಗರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ರಂಜನ್ ಗೌಡ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಸೋನಿಯಾ ವರ್ಮ, ಬಳ್ಳಮಂಜ ದೇವಸ್ಥಾನದ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ, ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಸೇವಾಭಾರತಿ ಅಧ್ಯಕ್ಷೆ ಸ್ವರ್ಣ ಗೌರಿ, ಕೂಟ ಮಹಾ ಜಗತ್ತು ತಾಲೂಕು ಅಧ್ಯಕ್ಷ ವಾಸುದೇವ ಸೋಮಯಾಜಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಸಹಿತ ಇತರ ಗಣ್ಯರು ಭಾಗವಹಿಸುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೀನು ಮಾರಾಟ ಫೆಡರೇಶನ್‌ನಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್‌ರೇ ಯಂತ್ರ ಕೊಡುಗೆ
ಬನ್ನಂಜೆ ಶನಿ ಕ್ಷೇತ್ರ: ಚಂದ್ರಮಂಡಲ ರಥೋತ್ಸವ