ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪೂರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗ ದ.ರಾ. ಬೇಂದ್ರೆ ಜನ್ಮ ದಿನದ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ಪುಸ್ತಕ ಪ್ರದರ್ಶನ ಮತ್ತು ಗೀತಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರಳ ಭಾಷೆ, ಜಾನಪದ ಸೊಗಡಿನ ಹಾಗೂ ಅನುಭವದ ಆಳದಿಂದ ಬಂದ ಅವರ ಕವನಗಳು ಓದುಗರ ಗಮನ ಸೆಳೆಯುತ್ತವೆ. ಸಾಹಿತ್ಯ ಲೋಕಕ್ಕೆ ಅವರು ನೀಡಿದ ಕೊಡುಗೆ ಸ್ಮರಿಸುವುದೇ ಅವರ ಹುಟ್ಟುಹಬ್ಬಕ್ಕೆ ನೀಡುವ ಯೋಗ್ಯ ಕಾಣಿಕೆಯಾಗಿದೆ. ವಿದ್ಯಾರ್ಥಿಗಳು ಅವರ ಬದುಕು-ಬರಹದಿಂದ ಪ್ರೇರಣೆ ಪಡೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಬೇಕು. ಬೇಂದ್ರೆಯಂತಹ ಸಾಹಿತಿಗಳ ಸಾಹಿತ್ಯ ಕೃತಿಗಳ ಅಧ್ಯಯನ ಮಾಡಿ ಅವುಗಳಲ್ಲಿನ ಮೌಲ್ಯ ಅರಿತು ಅವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ಕೃತಿಗಳ ಅಧ್ಯಯನದಿಂದ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಉಪನ್ಯಾಸಕಿ ಗೀತಾ ಕಿಲಬನೂರ ಸ್ವಾಗತಿಸಿದರು. ಸಾಲಿಯಾ ಮೋಮಿನ್ ನಿರೂಪಿಸಿದರು. ದಿಲ್ಶಾದ್ ನದಾಫ್ ವಂದಿಸಿದರು. ಬೇಂದ್ರೆ ಕುರಿತ ವಿಡಿಯೋ ಕ್ಲಿಪಿಂಗ್‌ನ ಎಲ್‌ಸಿಡಿ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಇದ್ದರು.