ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದಿಂದ ಅನುಕೂಲ

KannadaprabhaNewsNetwork | Published : Oct 5, 2024 1:33 AM

ಸಾರಾಂಶ

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿ ಬಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದಿಂದ ಬಡ ಮಧ್ಯಮದ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿ ಬಳಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣದಿಂದ ಬಡ ಮಧ್ಯಮದ ವರ್ಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ತವಟಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಶಾಲೆಗೆ ತಡೆಗೋಡೆ, ಚರಂಡಿ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣಕ್ಕೆ ಸರ್ಕಾರಕ್ಕೆ ಭೂಮಿ ಹಸ್ತಾಂತರ ಮಾಡುವ ವಿಚಾರವಾಗಿ ವಿಪಕ್ಷದವರು ಸಾಕಷ್ಟು ತೊಂದರೆ ಕೊಟ್ಟಿದ್ದರು. ಚಿಕ್ಕಮಗಳೂರಿನಲ್ಲಿ ಸ್ಥಾಪನೆ ಮಾಡಬೇಕಿದ್ದ ಕಾಲೇಜನ್ನು ಹೋರಾಟ ಮಾಡಿ ಹೊಸಕೋಟೆ ತಾಲೂಕಿಗೆ ತರಲಾಗಿದ್ದು, ಈಗಾಗಲೇ 10 ಕೋಟಿ ರು. ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ. ಹಾಗೆಯೇ ಗೊಣಕನಹಳ್ಳಿ ಬಳಿ ಎಪಿಎಂಸಿ ಮಾರುಕಟ್ಟೆ, ಹೂವಿನ ಮಾರುಕಟ್ಟೆ ನಿರ್ಮಾಣದಿಂದ ಈ ಭಾಗದ ರೈತರಿಗೆ ಸಮರ್ಪಕ ಮಾರುಕಟ್ಟೆ ಸೌಲಭ್ಯ ಧಕ್ಕಲಿದೆ ಎಂದು ಹೇಳಿದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೋಡಿಹಳ್ಳಿ ಸುರೇಶ್ ಮಾತನಾಡಿ, ಜಡಿಗೆನಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜೊತೆಗೆ ಅತ್ತಿವಟ್ಟ ಕೆರೆಗೆ ನೀರು ಹರಿಸಲು ಶಾಸಕರಲ್ಲಿ ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಈ ಭಾಗದ ರೈತರ ಸಮಸ್ಯೆಗಳಿಗೆ ಶಾಶ್ವತ ನೀರಾವರಿ ಪರಿಹಾರ ಸಿಗಲಿದೆ ಎಂದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಬಿಎಂಆರ್‌ಡಿಎ ಸದಸ್ಯ ಡಾ.ಎಚ್.ಎಮ್.ಸುಬ್ಬರಾಜು, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ್, ಓರೋಹಳ್ಳಿ ಗ್ರಾಪಂ ಪಿಡಿಓ ಲೋಕೇಶ್, ಮುಖಂಡರಾದ ಭತ್ಯಪ್ಪ, ಅಪ್ಪಸಂದ್ರನಾರಾಯಣಸ್ವಾಮಿ, ಕರಿಯಪ್ಪ, ಅಣ್ಣಯ್ಯಪ್ಪ, ಸರಸ್ವತಿ, ಲಕ್ಷ್ಮೀನಾರಾಯಣ, ಸಂಜೀವ್ ಗೌಡ, ನಾರಾಯಣಸ್ವಾಮಿ, ಸೋಲೂರು ರಮೇಶ್ ಮತ್ತಿತರರಿದ್ದರು.

ಓರೋಹಳ್ಳಿ ಗ್ರಾಪಂಗೆ ₹1 ಕೋಟಿ ಅನುದಾನ

ತಾಲೂಕಿನ ಓರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಒಂದು ಕೋಟಿ ರು. ವೆಚ್ಚದಲ್ಲಿ ಸಿಸಿ ರಸ್ತೆಗಳು ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕೆಲವೇ ದಿನಗಳಲ್ಲಿ ಭೂಮಿ ಪೂಜೆ ಮಾಡುತ್ತೇವೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

Share this article