ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಉತ್ತೀರ್ಣರಾಗಿರುವ ಹಂಸಶ್ರೀ ತಂದೆ-ತಾಯಿ ಕಾಲೇಜು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಚಿಕ್ಕ ವಯಸ್ಸಿನಿಂದಲೇ ಐಎಎಸ್ ಮಾಡಬೇಕು ಪಾಲಕರು ಹುರಿದುಂಬಿಸುತ್ತಿದ್ದರು. ಎಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ಯುಪಿಎಸ್‌ಸಿ ಬಗ್ಗೆ ಆಸಕ್ತಿ ಬಂತು. ಮೊದಲ ಪ್ರಯತ್ನದಲ್ಲಿ ಮುಖ್ಯ ಪರೀಕ್ಷೆ ಮತ್ತು ಸಂದರ್ಶನಕ್ಕೆ ಅರ್ಹತೆ ಸಿಗಲಿಲ್ಲ. ಆದರೆ, ಪರೀಕ್ಷೆಯ ಸ್ವರೂಪ ಅರ್ಥವಾಯಿತು. ನಂತರ ಎರಡು ವರ್ಷಗಳಿಂದ ಕೋಚಿಂಗ್ ಕ್ಲಾಸ್‌ಗಳ ಜೊತೆಗೆ ದಿನಕ್ಕೆ 8 ರಿಂದ ಗರಿಷ್ಠ 12 ತಾಸು ಓದುತ್ತಿದ್ದೆ. ದೇಶ ಪ್ರಗತಿ, ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಸಮಾಜ ಸೇವೆ ಮಾಡಬೇಕು ಎಂಬ ಆಸಕ್ತಿಯಿಂದ ಯುಪಿಎಸ್‌ಸಿ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೆ ಎಂದು ಹಂಸಶ್ರೀ ‘ಕನ್ನಡಪ್ರಭ’ಕ್ಕೆ ತಿಳಿಸಿದರು.ದೊಡ್ಡ ಸಂಖ್ಯೆಯಲ್ಲಿ ಜನ ಪರೀಕ್ಷೆ ಬರೆಯುತ್ತಾರೆ. ಆದರೆ, ಪರೀಕ್ಷೆ ತೆಗೆದುಕೊಳ್ಳುವವರು ಅಧ್ಯಯನದ ಜೊತೆಗೆ ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ತಾನು ಓದಿನ ಜೊತೆಗೆ ಸಂಗೀತ ನೃತ್ಯದಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು ಹಂಸಶ್ರೀ ಹೇಳಿದರು.