12 ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ

Published : Jun 03, 2025, 09:11 AM IST
vidhan soudha

ಸಾರಾಂಶ

ರಾಜ್ಯ ಸರ್ಕಾರವು ಸೋಮವಾರ 12 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ

 ಬೆಂಗಳೂರು :  ರಾಜ್ಯ ಸರ್ಕಾರವು ಸೋಮವಾರ 12 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಾಗಿದ್ದ ಕೆ.ಎ. ದಯಾನಂದ್‌ ಅವರನ್ನು ಕರ್ನಾಟಕ ಗೃಹ ಮಂಡಳಿ ಆಯುಕ್ತರನ್ನಾಗಿ ಹಾಗೂ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ.

ಡಾ.ಎಸ್‌. ಸೆಲ್ವಕುಮಾರ್‌ ಅವರಿಂದ ಖಾಲಿಯಾದ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಐಎಂಎ ವಿಶೇಷ ಅಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅವರನ್ನು ಹೆಚ್ಚುವರಿ ಹೊಣೆಗಾರಿಕೆ ನೀಡಿ ನೇಮಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಾಗಿದ್ದ ಕೆ.ಎ. ದಯಾನಂದ್‌ ಅವರನ್ನು ಕರ್ನಾಟಕ ಗೃಹ ಮಂಡಳಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದ್ದು, ಮುದ್ರಾಂಕ ಇಲಾಖೆ ಆಯುಕ್ತ ಸ್ಥಾನಕ್ಕೆ ಪೊಮ್ಮಲ ಸುನೀಲ್‌ ಕುಮಾರ್‌ ಅವರನ್ನು ಹೆಚ್ಚುವರಿ ಹೊಣೆ ನೀಡಿ ವರ್ಗಾವಣೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌ ಅವರನ್ನು ವಸತಿ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿದ್ದು, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿರುವ ಆರ್‌. ರಾಮಚಂದ್ರ ಅವರಿಗೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ಹೊಣೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇದೇ ವೇಳೆ ಅನ್ಬುಕುಮಾರ್‌ ಅವರಿಗೆ ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ರಜೆಯಿಂದ ವಾಪಸಾಗಿರುವ ಸಮೀರ್ ಶುಕ್ಲಾ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ (ಎಂಎಸ್‌ಎಂಇ ಮತ್ತು ಗಣಿ) ಕಾರ್ಯದರ್ಶಿಗೆ ನೇಮಿಸಿದ್ದು, ಯುವಜನ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿ ಡಿ. ರಂದೀಪ್‌ ಅವರನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್‌ ಚೌದರಿ ಅವರನ್ನು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿ ಹುದ್ದೆಗೆ, ರೇರಾ ಕಾರ್ಯದರ್ಶಿ ಇಬ್ರಾಹಿಂ ಮೈಗುರ್ ಅವರನ್ನು ಕೆಎಸ್‌ಆರ್‌ಟಿಸಿ ನಿರ್ದೇಶಕ (ಐಟಿ) ಹುದ್ದೆಗೆ ವರ್ಗಾಯಿಸಿದ್ದು, ಇದರಿಂದ ಖಾಲಿಯಾದ ರೇರಾ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಯನ್ನು ಎಂಎಸ್‌ಐಎಲ್‌ ವ್ಯವಸ್ಥಾಪಕ ನಿರ್ದೇಶಕ ಮನೋಜ್‌ಕುಮಾರ್‌ ಅವರಿಗೆ ನೀಡಲಾಗಿದೆ.

PREV
Read more Articles on

Recommended Stories

ಕೊಪ್ಪಳ ಜಿಲ್ಲೆಯಲ್ಲಿ ಮಣ್ಣು ತಿಂದು ರೈತ ಸಿಡಿಮಿಡಿ । ನಿಲ್ಲದ ರೈತರ ಯೂರಿಯಾ ಆಕ್ರೋಶ
ಡಿಕೆ ಮಹದಾಯಿ ಹೇಳಿಕೆಗೆ ಗೋವಾ ಸಿಎಂ ಆಕ್ರೋಶ