ಈವರೆಗೆ ಬಿಬಿಎಂಪಿ ಶಾಲಾ - ಕಾಲೇಜಿಗೆ 19 ಸಾವಿರ ವಿದ್ಯಾರ್ಥಿಗಳ ದಾಖಲಾತಿ

Published : Jun 17, 2025, 08:54 AM IST
BBMP latest news today photo

ಸಾರಾಂಶ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಿಬಿಎಂಪಿಯ ಶಾಲಾ-ಕಾಲೇಜುಗಳಿಗೆ ಈವರೆಗೆ 19,356 ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದು, ಜೂನ್‌ 30 ವರೆಗೆ ದಾಖಲಾತಿಗೆ ಅವಕಾಶವಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

 ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಿಬಿಎಂಪಿಯ ಶಾಲಾ-ಕಾಲೇಜುಗಳಿಗೆ ಈವರೆಗೆ 19,356 ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದು, ಜೂನ್‌ 30 ವರೆಗೆ ದಾಖಲಾತಿಗೆ ಅವಕಾಶವಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಶಿಶುವಿಹಾರದಿಂದ ಸ್ನಾತಕೋತ್ತರ ಪದವಿ ಕಾಲೇಜುವರೆಗೆ ಒಟ್ಟು 171 ಶಾಲಾ-ಕಾಲೇಜುಗಳನ್ನು ಬಿಬಿಎಂಪಿ ಹೊಂದಿದೆ. ಈ ಪೈಕಿ ಶಿಶು ವಿಹಾರಕ್ಕೆ 3986, ಪ್ರಾಥಮಿಕ ಶಾಲೆಗೆ 3833, ಪ್ರೌಢ ಶಾಲೆಗೆ 6383, ಪದವಿ ಪೂರ್ವ ಕಾಲೇಜಿಗೆ 3770, ಪದವಿ ಹಾಗೂ ಸ್ನಾತಕೋತ್ತರ ಪದವಿಗೆ 1385 ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ.

ಜೂನ್‌ 30ರ ವರೆಗೆ ದಾಖಲಾತಿ ಪ್ರಕ್ರಿಯೆ ನಡೆಯಲಿದೆ. ಕಳೆದ ವರ್ಷ ಒಟ್ಟು 23 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಈ ವರ್ಷವೂ ಅಷ್ಟೇ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆಯುವ ನಿರೀಕ್ಷೆ ಇದೆ. ದಾಖಲಾತಿ ಕುರಿತು ಶಾಲಾ-ಕಾಲೇಜು ಶಿಕ್ಷಕರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪಾಲಿಕೆ ಶಿಕ್ಷಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ

ಬಿಬಿಎಂಪಿ ಶಾಲಾ, ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಸಾಕಷ್ಟು ಉಚಿತ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಪ್ರಮುಖವಾಗಿ ನೋಟ್ ಪುಸ್ತಕ, ಪಠ್ಯ ಪುಸ್ತಕಗಳು, ಸಮವಸ್ತ್ರಗಳು, ಶೂ ಮತ್ತು ಕಾಲುಚೀಲ, ಬ್ಯಾಗ್ ಗಳು, ಸ್ವೇಟರ್, ಮಧ್ಯಾಹ್ನದ ಬಿಸಿಯೂಟ , ಶಿಶುವಿಹಾರದ ಮಕ್ಕಳಿಗೆ ಬಿಸಿ ಹಾಲು, ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿ, ಆಟವಾಡಲು ಆಟಿಕೆಗಳು, ಉನ್ನತ ಶಿಕ್ಷಣ ಒದಗಿಸಲು ಸ್ಮಾರ್ಟ್ ತರಗತಿ ಮೂಲಕ ಬೋಧನೆ, ಕಂಪ್ಯೂಟರ್ ಲ್ಯಾಬ್, ಶುದ್ಧ ಕುಡಿಯುವ ನೀರಿನ ಸೌಲಭ್ಯ, ಅತ್ಯುನ್ನತ ಶ್ರೇಣಿ ಪಡೆದ ಎಸ್ ಎಸ್ ಎಲ್ ಸಿ ಯಲ್ಲಿ ವಿದ್ಯಾರ್ಥಿಗಳಿಗೆ ತಲಾ 25 ಸಾವಿರ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 35 ಸಾವಿರ ಪ್ರೋತ್ಸಾಹ ಧನ ಸೇರಿದಂತೆ ಸಾಕಷ್ಟು ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.

PREV
Read more Articles on

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...