ಓಸಿ ಕಡ್ಡಾಯದಿಂದ 2 ಲಕ್ಷ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ: ಸಚಿವ ಜಾರ್ಜ್‌

Published : Jun 10, 2025, 08:15 AM IST
KJ George

ಸಾರಾಂಶ

ವಿದ್ಯುತ್‌ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ (ಓಸಿ) ಕಡ್ಡಾಯದಿಂದ ಸುಮಾರು 2 ಲಕ್ಷ ಮನೆ, ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆಯಾಗಿದೆ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತಂದು ಬಡವರಿಗೆ ವಿದ್ಯುತ್‌ ಸಂಪರ್ಕ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

 ಬೆಂಗಳೂರು :  ವಿದ್ಯುತ್‌ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ (ಓಸಿ) ಕಡ್ಡಾಯದಿಂದ ಸುಮಾರು 2 ಲಕ್ಷ ಮನೆ, ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆಯಾಗಿದೆ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತಂದು ಬಡವರಿಗೆ ವಿದ್ಯುತ್‌ ಸಂಪರ್ಕ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಓಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಹಾಗೂ ನೀರು ಸರಬರಾಜು ಮಾಡದಂತೆ ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಅದರಂತೆ ಕೆಇಆರ್‌ಸಿ ಆದೇಶದ ಪ್ರಕಾರವೇ ಎಸ್ಕಾಂಗಳು ವಿದ್ಯುತ್ ಸಂಪರ್ಕಕ್ಕೆ ಓಸಿ ಕಡ್ಡಾಯ ಮಾಡಿವೆ.

ಇದರಿಂದ ಬಡವರ ಮನೆ, ಕಟ್ಟಡ ಹಾಗೂ ಕೈಗಾರಿಕೆಗಳಿಗೆ ಓಸಿ ಇಲ್ಲದೆ ವಿದ್ಯುತ್‌ ಸಂಪರ್ಕ ಸಿಗುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ನಮ್ಮ ಅಂದಾಜು ಪ್ರಕಾರ 2ಲಕ್ಷ ಕಟ್ಟಡಗಳಿಗೆ ಸಂಪರ್ಕ ಸಿಗದೆ ಇರಬಹುದು. ಈ ಬಗ್ಗೆ ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ಅವರು ನಿಯಮ ತಿದ್ದುಪಡಿಗೆ ಪ್ರಸ್ತಾವನೆ ಮಂಡಿಸಿದರೆ ಮುಂದಿನ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕೆ.ಜೆ. ಜಾರ್ಜ್‌ ತಿಳಿಸದಿರು.

PREV
Read more Articles on

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು