:ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶ ಇದೆ. ಹೀಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲಹೆ ನೀಡಿದೆ.
ಬೆಂಗಳೂರು :ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶ ಇದೆ. ಹೀಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲಹೆ ನೀಡಿದೆ.
ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಕೈಚೆಲ್ಲುವುದು ಸರಿಯಲ್ಲ. ಉಳಿದೆರೆಡು ಪರೀಕ್ಷೆಗಳಲ್ಲಿ ಫಲಿತಾಂಶ ಉತ್ತಮಪಡಿಸಿಕೊಳ್ಳಬಹುದು. ಸಿಇಟಿ ಬರೆದರೆ ಮಾತ್ರ ಪಿಯುಸಿಯ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೂ ಸಿಇಟಿ ರ್‍ಯಾಂಕ್ ಕೊಟ್ಟು, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಮಾಡಬಹುದು. ಕಳೆದ ವರ್ಷ ಅನೇಕರಿಗೆ ರ್‍ಯಾಂಕ್ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಸಿಇಟಿ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸಲಹೆ ನೀಡಿದ್ದಾರೆ.
ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಶುಲ್ಕ ಪಾವತಿಸಿದ್ದು, 2.85 ಲಕ್ಷ ಪ್ರವೇಶ ಪತ್ರಗಳು ಡೌನ್ ಲೋಡ್ ಆಗಿವೆ.