ಬೆಂಗಳೂರು : ಮಳೆಗಾಲದಲ್ಲೂ 32.4 ಡಿ.ಸೆ. ತಾಪಮಾನ ದಾಖಲು

Published : Jul 14, 2026, 11:06 AM IST
temperature rising

ಸಾರಾಂಶ

ತೀವ್ರ ಮಳೆ ಕೊರತೆ ಎದುರಿಸುತ್ತಿರುವ ಉದ್ಯಾನ ನಗರಿಯ ತಾಪಮಾನ ಮಳೆಗಾಲದಲ್ಲೂ ಗಣನೀಯ ಏರಿಕೆ ಕಂಡು ಬಂದಿದ್ದು, ಸೋಮವಾರ ಗರಿಷ್ಠ ತಾಪಮಾನ 32.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸರಾಸರಿಗಿಂತ 4.1 ಡಿಗ್ರಿ ಸೆಲ್ಸಿಯಸ್ ಹೆಚ್ಚು.

  ಬೆಂಗಳೂರು :   ತೀವ್ರ ಮಳೆ ಕೊರತೆ ಎದುರಿಸುತ್ತಿರುವ ಉದ್ಯಾನ ನಗರಿಯ ತಾಪಮಾನ ಮಳೆಗಾಲದಲ್ಲೂ ಗಣನೀಯ ಏರಿಕೆ ಕಂಡು ಬಂದಿದ್ದು, ಸೋಮವಾರ ಗರಿಷ್ಠ ತಾಪಮಾನ 32.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸರಾಸರಿಗಿಂತ 4.1 ಡಿಗ್ರಿ ಸೆಲ್ಸಿಯಸ್ ಹೆಚ್ಚು.

5 ವರ್ಷಗಳ ಬಳಿಕ ನಗರದಲ್ಲಿ ಜುಲೈ ತಿಂಗಳಲ್ಲಿ ಗರಿಷ್ಠ ತಾಪಮಾನ

5 ವರ್ಷಗಳ ಬಳಿಕ ನಗರದಲ್ಲಿ ಜುಲೈ ತಿಂಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. 2021ರ ಜುಲೈನಲ್ಲಿ ಗರಿಷ್ಠ ತಾಪಮಾನ 32.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಪುನಃ ಪ್ರಸಕ್ತ ಜುಲೈನಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಅಂಕಿ-ಅಂಶಗಳು ತಿಳಿಸಿವೆ.  

ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸೋಮವಾರ ಗರಿಷ್ಠ ತಾಪಮಾನ

ಇನ್ನು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸೋಮವಾರ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸರಾಸರಿಗಿಂತ 4.4 ಡಿಗ್ರಿ ಸೆಲ್ಸಿಯಸ್ ಹೆಚ್ಚು. ಕಳೆದ 17 ದಿನಗಳಿಂದ ನಗರದಲ್ಲಿ ಮಳೆಯಾಗಿಲ್ಲ. ಮೋಡಗಳು ಇಲ್ಲದ ಕಾರಣ ಕಳೆದ 1 ವಾರದಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಜು.17ರವರೆಗೂ ನಗರದಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಅಮಾನತು
10 ದಿನದ ಹಳೆಯದ್ದು ಎಂದು ಸುಳ್ಳು ಹೇಳಿ 2.5 ತಿಂಗಳ ಹಿಂದಿನ ಕಾರು ಮಾರಾಟ: ಹೈಕೋರ್ಟ್‌ ನೋಟಿಸ್