ಬಿರುಬಿಸಿಲಿನ ನಡುವೆ ಕರಾವಳಿ, ಮಲೆನಾಡು ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಬ್ಬರ ಮುಂದುವರಿದಿದೆ. ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯದಲ್ಲಿ ಬಾಲಕ ಸೇರಿ ರಾಜ್ಯದಲ್ಲಿ ಮತ್ತೆ ನಾಲ್ವರು ಬಲಿಯಾಗಿದ್ದಾರೆ.
ಬೆಂಗಳೂರು : ಬಿರುಬಿಸಿಲಿನ ನಡುವೆ ಕರಾವಳಿ, ಮಲೆನಾಡು ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಬ್ಬರ ಮುಂದುವರಿದಿದೆ. ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯದಲ್ಲಿ ಬಾಲಕ ಸೇರಿ ರಾಜ್ಯದಲ್ಲಿ ಮತ್ತೆ ನಾಲ್ವರು ಬಲಿಯಾಗಿದ್ದಾರೆ.
ದಾವಣಗೆರೆ, ಗದಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು,
ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ಬೆಂಗಳೂರು ಮತ್ತಿತರ ಜಿಲ್ಲೆಗಳಲ್ಲಿ ಕೆಲಕಾಲ ಸಾಧಾರಣದಿಂದ ಉತ್ತಮ ಮಳೆಯಾಗಿದೆ.
ಇಂದು, ನಾಳೆಗೂ ಭಾರಿ ಮಳೆಯ ಮುನ್ನೆಚ್ಚರಿಕೆ
ಭಾನುವಾರ ಹಾಗೂ ಸೋಮವಾರ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ಹಾಗೂ ಸೋಮವಾರ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕದಲ್ಲಿ 11ರಿಂದ 20 ಸೆಂ.ಮೀ. ಮಳೆಯಾಗುವ ಸಾಧ್ಯತೆಯಿದೆ.