ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ : ರೇವಣ್ಣ

Published : Apr 30, 2024, 08:15 AM IST
Prajwal Revanna HD Revanna

ಸಾರಾಂಶ

ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ. ಅದನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಬೆಂಗಳೂರು :  ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ. ಅದನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಸೋಮವಾರ ಪದ್ಮನಾಭನಗರದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗುವುದು ಮೊದಲೇ ನಿರ್ಧಾರವಾಗಿತ್ತು. ಅವರಿಗೆ ಪ್ರಕರಣವನ್ನು ಎಸ್‌ಐಟಿಗೆ ವಹಿಸುವುದಾಗಲೀ, ಎಫ್‌ಐಆರ್‌ ದಾಖಲಿಸುವುದಾಗಲೀ ಗೊತ್ತಿರಲಿಲ್ಲ. ರಾಜ್ಯ ಸರ್ಕಾರ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಕಾನೂನು ರೀತಿ ತನಿಖೆ ಮಾಡಲಿ. ಎಸ್‌ಐಟಿಯವರು ಕರೆದರೆ ಪ್ರಜ್ವಲ್‌ ಹಾಜರಾಗುತ್ತಾರೆ. ನಾಲ್ಕೈದು ವರ್ಷದ ಹಿಂದಿನ ಕಥೆಯನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ತಿಳಿಸಿದರು.

ಕಳೆದ 40 ವರ್ಷಗಳಿಂದಲೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸಿಓಡಿ, ಲೋಕಾಯುಕ್ತ ಸೇರಿದಂತೆ ಹಲವು ತನಿಖೆಗಳು ನಡೆದಿದ್ದು, ತನಿಖೆಗಳನ್ನು ನಾವು ಎದುರಿಸಿದ್ದೇವೆ. ಪ್ರಜ್ವಲ್‌ ಪ್ರಕರಣವನ್ನು ಕಾನೂನು ಹೋರಾಟ ಮೂಲಕ ಎದುರಿಸುತ್ತೇವೆ. ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದ್ದು, ಇದಕ್ಕೆಲ್ಲಾ ಹೆದರುವುದಿಲ್ಲ. ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರವನ್ನು ದೇವೇಗೌಡರ ಬಳಿ ತಾವು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು.

PREV

Recommended Stories

ರೈತರ ಶ್ರೇಯೋಭಿವೃದ್ಧಿಯೇ ಸಂಘಗಳ ಗುರಿ
ರೈತರ ಆರ್ಥಿಕ ಸುಧಾರಣೆಗೆ ಹೈನುಗಾರಿಕೆ ಸಹಕಾರಿ