ತ್ರಿಬಲ್‌ ರೈಡಿಂಗ್‌ನಲ್ಲಿ ಬೈಕ್ ಚಲಿಸುವ ವೇಳೆ ಯುವತಿ ಜೊತೆ ಯುವಕನ ಅಸಭ್ಯ ವರ್ತನೆ

ಸಾರಾಂಶ

ಇಬ್ಬರು ಯುವಕರು ಹಾಗೂ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ನಗರ ಸಂಚಾರ ಪೊಲೀಸರು ಆ ದ್ವಿಚಕ್ರ ವಾಹನದ ಮಾಲೀಕನನ್ನು ಪತ್ತೆಹಚ್ಚಿ ದಂಡ ವಸೂಲಿ ಮಾಡಿದ್ದಾರೆ.

 ಬೆಂಗಳೂರು : ಇಬ್ಬರು ಯುವಕರು ಹಾಗೂ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ ಮಾಡುತ್ತಾ ಅಸಭ್ಯವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ನಗರ ಸಂಚಾರ ಪೊಲೀಸರು ಆ ದ್ವಿಚಕ್ರ ವಾಹನದ ಮಾಲೀಕನನ್ನು ಪತ್ತೆಹಚ್ಚಿ ದಂಡ ವಸೂಲಿ ಮಾಡಿದ್ದಾರೆ.

ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಫೆ.7ರ ರಾತ್ರಿ ಈ ಘಟನೆ ನಡೆದಿತ್ತು. ಸಂಚಾರ ನಿಯಮ ಉಲ್ಲಂಘಿಸಿ ತ್ರಿಬಲ್‌ ರೈಡಿಂಗ್‌ ಮಾಡಿದ್ದಲ್ಲದೇ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಈ ದ್ವಿಚಕ್ರ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ನಗರ ಸಂಚಾರ ಪೊಲೀಸರನ್ನು ಆಗ್ರಹಿಸಿದ್ದರು.

ಬೈಕ್‌ನಲ್ಲಿ ಇಬ್ಬರು ಯುವಕರು ಹಾಗೂ ಓರ್ವ ಯುವತಿ ರಾಗಿಗುಡ್ಡ ಬಸ್‌ ನಿಲ್ದಾಣದ ಕಡೆಯಿಂದ ಮೆಟ್ರೋ ನಿಲ್ದಾಣದ ಕಡೆಗೆ ತ್ರಿಬಲ್‌ ರೈಡಿಂಗ್‌ನಲ್ಲಿ ಹೊರಟ್ಟಿದ್ದರು. ಈ ವೇಳೆ ಓರ್ವ ಯುವಕ ವಾಹನ ಚಲಾಯಿಸಿದರೆ, ಆತನ ಹಿಂದೆ ಕುಳಿತ್ತಿದ್ದ ಯುವಕ ಮತ್ತು ಯುವತಿ ಪರಸ್ಪರ ಚುಂಬಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದರು. ಈ ಹುಚ್ಚಾಟದ ದೃಶ್ಯವನ್ನು ಬೇರೆ ವಾಹನ ಸವಾರರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಇದನ್ನು ಪ್ರಶ್ನಿಸಿದ ಆ ಸವಾರನಿಗೆ ಯುವಕರು ಧಮಕಿ ಸಹ ಹಾಕಿದ್ದರು. ಈ ಹುಚ್ಚಾಟದ ವಿಡಿಯೊವನ್ನು ಚೇತನ್‌ ಸೂರ್ಯ ಎಂಬುವವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿ, ನಗರ ಸಂಚಾರ ಪೊಲೀಸರಿಗೆ ಟ್ಯಾಗ್‌ ಮಾಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. 

Share this article