;Resize=(412,232))
ಬೆಂಗಳೂರು : ಅಗ್ಗದ ಬೆಲೆಯಲ್ಲಿ ಟ್ಯಾಕ್ಸಿ ಸೇವೆ ನೀಡಲು ವಿಯೆಟ್ನಾಂ ಮೂಲದ ಗ್ರೀನ್ ಎಸ್‌ಎಂ ಟ್ಯಾಕ್ಸಿ ಬೆಂಗಳೂರಿಗೆ ಆಗಮಿಸಿದ್ದು, ಇದು ಸ್ಥಳೀಯ ಚಾಲಕರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಚಾಲಕರ ಹಿತರಕ್ಷಣೆಗಾಗಿ ಈ ಸಂಸ್ಥೆಗೆ ಸಂಬಂಧಿಸಿದ ಹೊಸ ಟ್ಯಾಕ್ಸಿಗಳ ನೋಂದಣಿ ತಡೆಹಿಡಿಯುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಸುರೇಶ್, ವಿಯೆಟ್ನಾಂ ಮೂಲದ ಗ್ರೀನ್ ಎಸ್‌ಎಂ ಟ್ಯಾಕ್ಸಿ ಸಂಸ್ಥೆಯ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸ್ಥಗಿತಕ್ಕೆ ಚಾಲಕರು ಸೇರಿ ಇನ್ನಿತರರು ಮನವಿ ಮಾಡಿದ್ದರು. ಆದರೆ, ಈಗಾಗಲೇ ವಿಯೆಟ್ನಾಂ ಮೂಲದ ಗ್ರೀನ್ ಎಸ್‌ಎಂ ಟ್ಯಾಕ್ಸಿ ಸಂಸ್ಥೆಯ 100 ಟ್ಯಾಕ್ಸಿಗಳ ನೋಂದಣಿ ಮಾಡಲಾಗಿದೆ.
ಹೀಗಾಗಿ, ಮುಂದಿನ ಆದೇಶವರೆಗೆ ಹೊಸದಾಗಿ ಯಾವುದೇ ನೋಂದಣಿ ಮಾಡದಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ರಾಜ್ಯ ಚಾಲಕರ ಹಿತ ಕಾಪಾಡಲು ಸರ್ಕಾರ ನಿರ್ಧಾರ ಕೈಗೊಳ್ಳುತ್ತಿದೆ. ಇನ್ನು ಮುಂದೆ ಗ್ರೀನ್ ಎಸ್‌ಎಂ ಟ್ಯಾಕ್ಸಿಗೆ ಅನುಮತಿ ನೀಡಬೇಕೋ, ಬೇಡವೋ ಎಂಬ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.