ಹಾಲು, ಮೊಸರು ಆಯ್ತು, ಇದೀಗ ಬಸ್‌ ದರ ಏರಿಕೆ - ನ.5ರಿಂದಲೇ ಹೊಸ ದರ

Published : Nov 02, 2026, 06:51 AM IST
KSRTC

ಸಾರಾಂಶ

ಹಾಲು, ಮೊಸಲು ಸೇರಿದಂತೆ ಕ್ಷೀರೋತ್ಪನ್ನಗಳ ದರ ಏರಿಕೆಯ ಭರ್ಜರಿ ಆಘಾತದ ಬೆನ್ನಲ್ಲೇ ರಾಜ್ಯದ ಜನರಿಗೀಗ ಬಸ್‌ ದರ ಏರಿಕೆಯ ಶಾಕ್‌ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ತಿಂಗಳ 5ರಿಂದ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ

ಚಿಕ್ಕಬಳ್ಳಾಪುರ: ಹಾಲು, ಮೊಸಲು ಸೇರಿದಂತೆ ಕ್ಷೀರೋತ್ಪನ್ನಗಳ ದರ ಏರಿಕೆಯ ಭರ್ಜರಿ ಆಘಾತದ ಬೆನ್ನಲ್ಲೇ ರಾಜ್ಯದ ಜನರಿಗೀಗ ಬಸ್‌ ದರ ಏರಿಕೆಯ ಶಾಕ್‌ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ತಿಂಗಳ 5ರಿಂದ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಏರಿಕೆ

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ 2 ಸಾವಿರ ಕೋಟಿ ರುಪಾಯಿ ನಷ್ಟ ಆಗುತ್ತಿದೆ. ಈಗಾಗಲೇ ಸಂಸ್ಥೆಗಳು 9 ಸಾವಿರ ಕೋಟಿ ರುಪಾಯಿ ನಷ್ಟದಲ್ಲಿವೆ. ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ಎಂದರು.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ದರ ಏರಿಕೆ ನಿರ್ಧಾರವನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಮತ್ತು ಸಾರಿಗೆ ಇಲಾಖೆಗೆ ನೀಡಲಾಗಿದೆ ಎಂದು ಹೇಳಿದರು.

ನ.4 ರಂದು ನಿರ್ಧಾರ:

ನ. 4ರಂದು ಸಾರಿಗೆ ಇಲಾಖೆ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಎಷ್ಟು ಪ್ರಮಾಣದಲ್ಲಿ ದರ ಹೆಚ್ಚಿಸಬೇಕೆಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಪರಿಷ್ಕೃತ ಪ್ರಯಾಣ ದರ ನ.5ರಿಂದಲೇ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ನಗರದ ವಿವಿಧೆಡೆ 71ನೇ ಕನ್ನಡ ರಾಜ್ಯೋತ್ಸವ
ಆರ್ಡರ್ ಮಾಡಿದ್ದ ವೆಜ್ ಧಮ್‌ ಬಿರಿಯಾನಿಯಲ್ಲಿ ಚಿಕನ್ ಪೀಸ್!