ಏರ್‌ ಶೋ ಪ್ರವೇಶ ಶುಲ್ಕ ₹1000 ನಿಗದಿ - ಫೆ.10ರಿಂದ 14ರವರೆಗೆ ವೈಮಾನಿಕ ಪ್ರದರ್ಶನ

Published : Jan 28, 2025, 05:48 AM IST
air show of air force in bhopal

ಸಾರಾಂಶ

ನಗರದ ಯಲಹಂಕ ಏರ್‌ಫೋರ್ಸ್‌ ಸ್ಟೇಷನ್‌ನಲ್ಲಿ ಫೆ.10ರಿಂದ 14ರವರೆಗೆ ನಡೆಯಲಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2025’ರಲ್ಲಿ ಯುದ್ಧ ವಿಮಾನಗಳ ಹಾರಾಟ ಪ್ರದರ್ಶನವನ್ನು ವೀಕ್ಷಿಸಲು ಸಾರ್ವಜನಿಕರಿಗೆ 1,000 ರು. ಶುಲ್ಕ ನಿಗದಿ 

  ಬೆಂಗಳೂರು :  ನಗರದ ಯಲಹಂಕ ಏರ್‌ಫೋರ್ಸ್‌ ಸ್ಟೇಷನ್‌ನಲ್ಲಿ ಫೆ.10ರಿಂದ 14ರವರೆಗೆ ನಡೆಯಲಿರುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ-2025’ರಲ್ಲಿ ಯುದ್ಧ ವಿಮಾನಗಳ ಹಾರಾಟ ಪ್ರದರ್ಶನವನ್ನು ವೀಕ್ಷಿಸಲು ಸಾರ್ವಜನಿಕರಿಗೆ 1,000 ರು. ಶುಲ್ಕ ನಿಗದಿಪಡಿಸಲಾಗಿದ್ದು, ಆನ್‌ಲೈನ್‌ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಫೆ.10ರಂದು ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಶುಲ್ಕ ಪಾವತಿಸಿ ಟಿಕೆಟ್ ಖರೀದಿಸಿರುವವರು ಫೆ.11ರಿಂದ ಫೆ.14ರವರೆಗೆ 4 ದಿನಗಳಲ್ಲಿ ಯಾವುದಾದರೂ ಒಂದು ದಿನ ಏರ್ ಡಿಸ್ಪ್ಲೇ ಏರಿಯಾಗೆ (ಎಡಿವಿಎ) ತೆರಳಿ ಪ್ರದರ್ಶನ ನೋಡಬಹುದು. ಬೆಳಗ್ಗೆ ಮತ್ತು ಮಧ್ಯಾಹ್ನದ ಅವಧಿ ಸೇರಿ ನಿತ್ಯ ಎರಡು ಬಾರಿ ಪ್ರದರ್ಶನ ಇರಲಿದೆ. ವಿದೇಶಿಯರಿಗೆ 50 ಯುಎಸ್ ಡಾಲರ್ ಶುಲ್ಕ ನಿಗದಿಪಡಿಸಲಾಗಿದೆ.

140ಕ್ಕೂ ಹೆಚ್ಚು ಕಂಪನಿ ನೋಂದಣಿ:

ಏರೋ ಇಂಡಿಯಾದಲ್ಲಿ ವಿದೇಶಗಳ 140ಕ್ಕೂ ಹೆಚ್ಚು ವಿದೇಶಿ ರಕ್ಷಣಾ ಉತ್ಪನ್ನಗಳ ಉತ್ಪಾದಕಾ ಕಂಪನಿಗಳು ಭಾಗವಹಿಸಲು ನೋಂದಣಿ ಮಾಡಿಕೊಂಡಿವೆ. ಮಿಲಿಟಿರಿ ಮತ್ತು ಮಿಲಿಟರಿ ಸರಕು ಸಾಗಣೆ ವಿಮಾನಗಳು, ಶಸ್ತ್ರಾಸ್ತ್ರಗಳು, ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ನೂರಾರು ಭಾರತೀಯ ಕಂಪನಿಗಳು ಕೂಡ ಭಾಗವಹಿಸುತ್ತಿವೆ.

ಮತ್ತೊಂದೆಡೆ ರಷ್ಯಾ, ಅಮೆರಿಕಾ, ಸ್ವಿಡನ್ ಸೇರಿದಂತೆ ಯುರೋಪಿನ ವಿವಿಧ ದೇಶಗಳ ಯುದ್ಧ ವಿಮಾನಗಳು, ಸರಕು ಸಾಗಣೆ ಮತ್ತು ಲಘು ನಾಗರಿಕ ವಿಮಾನ, ಐಷಾರಾಮಿ ವಿಮಾನಗಳ ಕಂಪನಿಗಳು ಕೂಡ ಏರೋ ಇಂಡಿಯಾದಲ್ಲಿ ಭಾಗವಹಿಸುತ್ತಿವೆ. ಸ್ವೀಡನ್ ಮೂಲಕ ಸಾಬ್ ಕಂಪನಿಯ ಗ್ರಿಪನ್ ವಿಮಾನದ ಮಾದರಿಯನ್ನು ಪ್ರದರ್ಶನಕ್ಕೆ ಇರಿಸಲಿದೆ. ಅಲ್ಲದೇ, ಸಾಬ್ ಕಂಪನಿಯ ಅನೇಕ ರಕ್ಷಣಾ ಉತ್ಪನ್ನಗಳು ಪ್ರದರ್ಶನಕ್ಕೆ ಇರಲಿವೆ.

ಆತ್ಮನಿರ್ಭರ ಪರಿಕಲ್ಪನೆಗೆ ಆದ್ಯತೆ

ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿ ಭಾರತೀಯ ಯುದ್ಧ ವಿಮಾನಗಳು ಹಾಗೂ ಹೆಲಿಕಾಪ್ಟರ್‌ಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲಘು ಯುದ್ಧ ವಿಮಾನ ತೇಜಸ್, ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ, ಹೆಲಿಕಾಪ್ಟರ್‌ಗಳ ಮೂಲಕ ಆಕರ್ಷಕ ಪ್ರದರ್ಶನ ನೀಡುವ ಸಾರಂಗ ತಂಡ ಸೇರಿದಂತೆ ಭಾರತದ ಅನೇಕ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಪ್ರದರ್ಶನ ನೀಡಲಿವೆ. 

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು
ಗುತ್ತಿಗೆದಾರರಿಂದಲೇ ಕಮಿಷನ್‌ ಕೇಳಿದ ಗುತ್ತಿಗೆದಾರರು! : ಇಬ್ಬರು ಅಮಾನತು