ಗೊಂದಲ ಬೆನ್ನಲ್ಲೇ ಕೇಂದ್ರ ಆಯೋಗದ ತಂಡ ನಾಳೆ ರಾಜ್ಯಕ್ಕೆ

Published : Jul 05, 2026, 07:15 AM IST
SIR

ಸಾರಾಂಶ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆಯಲ್ಲಿನ ಗೊಂದಲಗಳ ಬಗ್ಗೆ ಆರೋಪಗಳು ಹಾಗೂ ದೂರು ಸಲ್ಲಿಕೆ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಸೋಮವಾರ ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ.

  ಬೆಂಗಳೂರು :  ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆಯಲ್ಲಿನ ಗೊಂದಲಗಳ ಬಗ್ಗೆ ಆರೋಪಗಳು ಹಾಗೂ ದೂರು ಸಲ್ಲಿಕೆ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಸೋಮವಾರ ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ.

 ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ

ಈ ತಂಡವು ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಮಾಹಿತಿ ಸಂಗ್ರಹಿಸಲಿದೆ. ಅಂತೆಯೇ ಈ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಕೇಳಿ ಬಂದಿರುವ ಆರೋಪಗಳು, ಲೋಪಗಳು ಹಾಗೂ ಗೊಂದಲಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದೆ. ಅಂತೆಯೇ ರಾಜಕೀಯ ಪಕ್ಷಗಳಿಂದ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆಯೂ ಕೇಂದ್ರ ಅಧಿಕಾರಿಗಳ ತಂಡ ಸಮಾಲೋಚನೆ ನಡೆಸಲಿದೆ ಎಂದು ತಿಳಿದು ಬಂದಿದೆ.

ವಿಶ್ವಾಸಾರ್ಹತೆ ಹಾಗೂ ನಿಖರತೆ ಬಗ್ಗೆಯೇ ಪ್ರಶ್ನೆ

ಎಸ್‌ಐಆರ್‌ ಪ್ರಕ್ರಿಯೆಯ ವಿಶ್ವಾಸಾರ್ಹತೆ ಹಾಗೂ ನಿಖರತೆ ಬಗ್ಗೆಯೇ ಪ್ರಶ್ನೆಗಳು ಎದ್ದಿರುವುದರಿಂದ ಕೇಂದ್ರ ತಂಡ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದ ಎಸ್‌ಐಆರ್‌ ಪ್ರಕ್ರಿಯೆಯ ವಾಸ್ತವಾಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಲಿದೆ.

ಬಳಿಕ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಎಸ್‌ಐಆರ್‌ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಹೊರರಾಜ್ಯದ ಅಥವಾ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ನೇಮಿಸುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ರಾಜಕೀಯ ಪಕ್ಷಗಳ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ. ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಈ ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇವೆಲ್ಲವುಗಳ ಬಗ್ಗೆ ಮಾಹಿತಿ ಪಡೆದು ಅಂತಿಮವಾಗಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

SIRನಲ್ಲಿ ಗೊಂದಲ: ಚುನಾವಣಾಧಿಕಾರಿಗೆ ಬಿಜೆಪಿ ದೂರು
ಚುನಾವಣೆ ಆಯೋಗ ಕತ್ತೆ ಕಾಯ್ತಿದೆಯೇ ? : ಪ್ರಿಯಾಂಕ್‌