ಸಾಹುಕಾರ್‌ & ಟೀಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಸ್ತ್ರ

Published : Nov 21, 2026, 07:13 AM IST
Shivashankarappa S Sahukar

ಸಾರಾಂಶ

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದ ಅಮಾನತುಗೊಂಡಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಯೋಗಿಸಲು ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದ ಅಮಾನತುಗೊಂಡಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಯೋಗಿಸಲು ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

ನೇಮಕಾತಿ ಅಕ್ರಮ ಪ್ರಕರಣ

ಈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಶಿವಶಂಕರಪ್ಪ, ಸದಸ್ಯೆ ಬಿ.ವಿ.ಗೀತಾ ಶಿವಮೂರ್ತಿ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಬಂಧನವಾಗಿದೆ. ಸಾರ್ವಜನಿಕ ಸೇವೆಯಲ್ಲಿದ್ದು ಅಧಿಕಾರ ದುರ್ಬಳಕೆ ಮಾಡಿಕೊಂಡು ನೇಮಕಾತಿಯಲ್ಲಿ ಹಣ ಪಡೆದ ಆರೋಪಕ್ಕೆ ಈ ಮೂವರು ತುತ್ತಾಗಿದ್ದಾರೆ.

ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17(ಎ) ಅಡಿ ಕ್ರಮ

ಈ ಮೂವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17(ಎ) ಅಡಿ ಕ್ರಮ ಜರುಗಿಸಲು ಅನುಮತಿ ಕೋರಿ ಸರ್ಕಾರಕ್ಕೆ ಎಸ್‌ಐಟಿ ಪತ್ರ ಬರೆದಿತ್ತು. ಈ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಬೆನ್ನಲ್ಲೇ ಈಗ ಶಿವಶಂಕರಪ್ಪ, ಗೀತಾ ಹಾಗೂ ಜ್ಞಾನೇಂದ್ರ ಅವರಿಗೆ ಮತ್ತೊಂದು ಸಂಕಟ ಎದುರಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಓಡಾಟಕ್ಕೆ ಸುಪ್ರೀಂ ಅಸ್ತು
ಕೆಐಎನಲ್ಲಿ ₹12 ಕೋಟಿ ಡ್ರಗ್ಸ್‌ ಜಪ್ತಿ: 4 ಬ್ಯಾಂಕಾಕ್‌ ಪ್ರಜೆಗಳ ಬಂಧನ