ಏಷ್ಯಾನೆಟ್ ಸುವರ್ಣ ನ್ಯೂಸ್‌, ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ವಾಜಪೇಯಿ ಪ್ರಶಸ್ತಿ ಪ್ರದಾನ

ಸಾರಾಂಶ

ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್‌ ಪ್ರಧಾನರಾದ ಸಂಪಾದಕ ರವಿ ಹೆಗಡೆ ಅವರಿಗೆ ಸರ್ವಶ್ರೀ ಅಟಲ್‌ ಬಿಹಾರಿ ವಾಜಪೇಯಿ ಅವರ 9ನೇ ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ಮೈಸೂರು : ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್‌ ಪ್ರಧಾನರಾದ ಸಂಪಾದಕ ರವಿ ಹೆಗಡೆ ಅವರಿಗೆ ಸರ್ವಶ್ರೀ ಅಟಲ್‌ ಬಿಹಾರಿ ವಾಜಪೇಯಿ ಅವರ 9ನೇ ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.

ಕುವೆಂಪುನಗರದ ಗಾನಭಾರತಿಯಲ್ಲಿ ಸಂಧ್ಯಾ ಸುರಕ್ಷಾ ಟ್ರಸ್ಟ್, ಅಟಲ್‌ ಜಿ ಸಂಸ್ಕಾರ ಭಾರತ್ ಪ್ರತಿಷ್ಠಾನ, ಜಿಲ್ಲಾ ಬ್ರಾಹ್ಮಣ ಮಹಾಸಭಾ, ಶಾಕಂಬರಿ ಧಾರ್ಮಿಕ ಶ್ರದ್ಧಾ ಕೇಂದ್ರವು ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ರವಿ ಹೆಗಡೆ ಅವರಿಗೆ ಪ್ರಶಸ್ತಿ ಫಲಕ, ವಾಜಪೇಯಿ ಅವರ ಭಾವಚಿತ್ರ, ಭಿನ್ನವತ್ತಳೆ, ಪೇಟ, ಹಾರ, ಫಲತಾಂಬೂಲ ನೀಡಿ ಗೌರವಿಸಿದರು. 

Share this article