ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ - ಗೋಕರ್ಣ ಸಮೀಪ ಘಟನೆ

Published : Jun 23, 2025, 10:28 AM IST
Uttarpradesh, conversion, Case, Christianity, Uttar Pradesh, Meerut

ಸಾರಾಂಶ

ಹಿಂದುಳಿದ ವರ್ಗದವರನ್ನು ಧರ್ಮ ಬೋಧನೆ ಮೂಲಕ ಮನಪರಿವರ್ತನೆ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಮಧ್ಯಾಹ್ನ ಇಲ್ಲಿಗೆ ಸಮೀಪದ ತಲಗೇರಿ ಆಗೇರ ಕಾಲನಿಯಲ್ಲಿ ನಡೆದಿದೆ.

 ಗೋಕರ್ಣ :  ಹಿಂದುಳಿದ ವರ್ಗದವರನ್ನು ಧರ್ಮ ಬೋಧನೆ ಮೂಲಕ ಮನಪರಿವರ್ತನೆ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಮಧ್ಯಾಹ್ನ ಇಲ್ಲಿಗೆ ಸಮೀಪದ ತಲಗೇರಿ ಆಗೇರ ಕಾಲನಿಯಲ್ಲಿ ನಡೆದಿದೆ.

ಹೊರಗಿನಿಂದ ಬಂದ ಕೆಲವರು ಇಲ್ಲಿನ ಮನೆಯೊಂದರಲ್ಲಿ ಪ್ರಾರ್ಥನೆಯಲ್ಲಿ ತೊಡಗಿದ್ದು, ಅಕ್ಕಪಕ್ಕದ ಮನೆಯವರನ್ನು ಸಹ ಸೇರಿಸಿದ್ದಾರೆ ಎನ್ನಲಾಗಿದೆ. ಪೂಜೆ ಮತ್ತಿತರ ಧಾರ್ಮಿಕ ಕಾರ್ಯ ಮಾಡುವ ಮೂಲಕ ಧರ್ಮದ ಬಗ್ಗೆ ಬೋಧಿಸಿ ಪರಿವರ್ತನೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ಬಂದ ಪಿಎಸ್ಐ ಖಾದರ್ ಬಾಷಾ ತಿಳಿವಳಿಕೆ ನೀಡಿ ಹೊರಗಿನಿಂದ ಬಂದವರನ್ನು ವಾಪಸ್‌ ಕಳುಹಿಸಿದ್ದಾರೆ.

ಈ ವೇಳೆ ಸ್ಥಳೀಯರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಬಡವರಿಗೆ ಹಣದ ಆಮಿಷ ತೋರಿಸಿ ಈ ರೀತಿ ಘಟನೆ ನಡೆಯುತ್ತಿವೆ. ಅವರನ್ನು ಸುಮ್ಮನೆ ಬಿಡಬೇಡಿ ಎಂದು ಪಟ್ಟು ಹಿಡಿದರು. ಇಲ್ಲಿನ ಹಲವೆಡೆ ಹಿಂದುಳಿದ ವರ್ಗದ ಅನಾರೋಗ್ಯ ಪೀಡಿತರ ಮನೆ, ಬಡವರ ಮನೆಗೆ ತೆರಳಿ ಹಣದ ಆಮಿಷ ಒಡ್ಡಿ ಕ್ರೈಸ್ತ ಧರ್ಮಕ್ಕೆ ಬರುವಂತೆ ಮನ ಒಲಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಹಲವು ಹಿಂದುಳಿದ ವರ್ಗದ ಮಕ್ಕಳು ಕುತ್ತಿಗೆಯಲ್ಲಿ ಶಿಲುಬೆ ಹಾರ ಹಾಕಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ವಿಚಾರಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಪವಿತ್ರ ಹಿಂದೂ ಕ್ಷೇತ್ರದಲ್ಲಿ ಈ ರೀತಿ ಘಟನೆ ನಡೆದಿದ್ದು ಅವಮಾನ. ಸಾರ್ವಜನಿಕರು ಒಂದಾಗಬೇಕು. ಹೊರಗಿನವರು ಬಂದು ಹಿಂದೂ ಧರ್ಮದ ಮೇಲೆ ಆಕ್ರಮಣ ಮಾಡುತ್ತಿರುವುದನ್ನು ತಡೆದು ಅವರನ್ನು ಪೊಲೀಸರಿಗೆ ನೀಡಲಾಗಿದೆ. ಇನ್ನು ಮುಂದೆ ನಮ್ಮ ಭಾಗದಲ್ಲಿ ಇಂತಹ ಮತಾಂತರದಂತಹ ಕೃತ್ಯ ನಡೆಸಿದರೆ ತಕ್ಕಶಾಸ್ತಿ ಮಾಡುತ್ತೇವೆ.

-ಮಂಜುನಾಥ ಜನ್ನು, ಗ್ರಾಪಂ ಸದಸ್ಯ

ಮತಾಂತರ ಮಾಡುವವರ ವಿರುದ್ಧ ಪೊಲೀಸರ ಮೂಲಕವೇ ಕ್ರಮಕ್ಕೆ ಆಗ್ರಹಿಸಿದ್ದೇವೆ. ನಿರ್ಲಕ್ಷಿಸಿದರೆ ಮುಂದಿನ ದಿನದಲ್ಲಿ ಹೋರಾಟ ಮಾಡುತ್ತೇವೆ. ನಮ್ಮ ಸಮಾಜದವರು ಸಭೆ ಸೇರಿ ನಿರ್ಧಾರ ಕೈಗೊಳ್ಳುತ್ತೇವೆ.

-ಮಹೇಶ ಮೂಡಂಗಿ, ತದಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ.

PREV
Read more Articles on

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ