;Resize=(412,232))
ಶಿವಮೊಗ್ಗ : ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ಗೆಳೆಯರೊಂದಿಗೆ ಟ್ರೆಕ್ಕಿಂಗ್ ತೆರಳಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಬಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ (28) ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಲ್ಲಾಸ್ ಗೌಡ ತಮ್ಮ ಸ್ನೇಹಿತರ ಜೊತೆ ಟಿ.ಟಿ.ವಾಹನದಲ್ಲಿ ಕೊಡಚಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಶನಿವಾರ ಬೆಳಗ್ಗೆ ಬೆಟ್ಟ ಹತ್ತಿ, ಸರ್ವಜ್ಞ ಪೀಠದಿಂದ ವಾಪಸ್ ಇಳಿಯುವಾಗ ತೀವ್ರ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ನೇಹಿತರು ಅವರನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಉಲ್ಲಾಸ್ ಗೌಡ ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ಉಲ್ಲಾಸ್ ಗೌಡ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿಸೆಂಬರ್ನಲ್ಲಿ ಮದುವೆಗೆ ದಿನ ನಿಗದಿಯಾಗಿತ್ತು. ಮದುವೆಗೆ ಮುನ್ನ ಅವರ ಹಠಾತ್ ಸಾವು ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ.