ಬೆಂಗಳೂರು ವಿವಿ ಈಜುಕೊಳ ನೀರು ಕಲುಷಿತ : ವಿಡಿಯೋ ಸಹಿತ ಸಿಎಂಗೆ ವಿದ್ಯಾರ್ಥಿಗಳ ದೂರು

Published : Jun 17, 2025, 08:47 AM IST
Bengaluru VV

ಸಾರಾಂಶ

ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಈಜುಕೊಳವನ್ನು ಕಳೆದ ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರಿನಲ್ಲೇ ವಿದ್ಯಾರ್ಥಿಗಳು ಈಜುವ ಪರಿಸ್ಥಿತಿ ನಿರ್ಮಾಣವಾಗಿದೆ

 ಬೆಂಗಳೂರು :  ಬೆಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಕಾಲೇಜಿನ ಈಜುಕೊಳವನ್ನು ಕಳೆದ ಸುಮಾರು 20 ದಿನಗಳಿಂದ ಸ್ವಚ್ಛಗೊಳಿಸದ ಕಾರಣ ಕಲುಷಿತ ನೀರಿನಲ್ಲೇ ವಿದ್ಯಾರ್ಥಿಗಳು ಈಜುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.ಈ ಸಂಬಂಧ ಜಾಲತಾಣ ಎಕ್ಸ್‌ನಲ್ಲಿ ಹಸಿರು ಬಣ್ಣಕ್ಕೆ ತಿರುಗಿರುವ ಈಜುಕೊಳದಲ್ಲಿ ವಿದ್ಯಾರ್ಥಿಗಳು ಈಜುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿರುವ ವಿದ್ಯಾರ್ಥಿ ಸಂಘಟನೆ ಮುಖಂಡ ಕಾಂತಕುಮಾರ್, ಸಮಸ್ಯೆಯನ್ನು ಪರಿಹರಿಸುವಂತೆ ಕ್ರೀಡಾ ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಕಳೆದ ಸುಮಾರು 20 ದಿನಗಳಿಂದ ನೀರು ಬದಲಿಸಿಲ್ಲ. ಈ ಕುರಿತು ಪ್ರಶ್ನಿಸಿದಾಗ, ನೀರು ಹೀಗೆ ಇರುವುದು. ನೀವು ಯಾರಿಗೆ ಬೇಕಾದರೂ ಹೇಳಿ ಎಂದು ಅಲ್ಲಿನ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ. ಅಶುದ್ಧ ನೀರಿನಿಂದ ಈಜೀದರೆ ಚರ್ಮ ರೋಗ, ಕಿವಿ, ಕಣ್ಣು, ಶ್ವಾಸಕೋಶ ಸಂಬಂಧಿಸಿದ ಸಮಸ್ಯೆ ಉಂಟಾಗುತ್ತವೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈಜುಕೊಳದ ನೀರನ್ನು ನಿಯಮಿತವಾಗಿ ಬದಲಿಸಬೇಕು. ಕೊಳವನ್ನು ಸ್ವಚ್ಛಗೊಳಿಸಬೇಕು. ಯಾವುದೇ ಈಜುಕೊಳವಾದರೂ ಇದೊಂದು ಸಾಮಾನ್ಯ ಪ್ರಕ್ರಿಯೆ. ಆದರೆ, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿನ ಈಜುಕೊಳವನ್ನೇ ಕೆಟ್ಟದಾಗಿ ನಿರ್ವಹಿಸುತ್ತಿರುವುದು ಇಲ್ಲಿನ ಸಿಬ್ಬಂದಿಯ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ. ಕೂಡಲೇ ಈ ಕುರಿತು ಕ್ರಮ ಕೈಗೊಂಡು ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವಂತೆ ಕೋರಲಾಗಿದೆ.

 

PREV
Read more Articles on

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...