ನಗರದ 41 ಕೆರೆಗಳಲ್ಲಿ ಗಣೇಶ ವಿಸರ್ಜನೆಗೆ ಪಾಲಿಕೆ ವ್ಯವಸ್ಥೆ

Published : Aug 23, 2025, 08:22 AM IST
Vastu tips for Ganesha idol placement

ಸಾರಾಂಶ

ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಗೆ ನಗರದ 41 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, 489 ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

  ಬೆಂಗಳೂರು :  ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಗೆ ನಗರದ 41 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, 489 ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ವರ್ಷದಿಂದ ಈ ಬಾರಿಯೂ ಬಿಬಿಎಂಪಿಯಿಂದ ಗಣೇಶ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾಲಿಕೆಯ 75 ಉಪ ವಿಭಾಗದ ಮಟ್ಟದಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕ ಗಣೇಶ ಪ್ರತಿಷ್ಠಾಪಿಸುವವರಿಗೆ ಬಿಬಿಎಂಪಿ, ಬೆಸ್ಕಾಂ, ಪೊಲೀಸ್‌ ಹಾಗೂ ಅಗ್ನಿ ಶಾಮಕ ದಳದಿಂದ ಅನುಮತಿ ಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ. ಅನುಮತಿ ಪತ್ರ ನೀಡುವುದಕ್ಕೆ ಆಯಾ ಇಲಾಖೆಗಳಿಂದ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಇನ್ನೂ ಗಣೇಶ ಮೂರ್ತಿಗಳ ವಿಸರ್ಜನೆಗೆ ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಿಸರ್ಜನಾ ವಾಹನ ವ್ಯವಸ್ಥೆ ಮಾಡಲಾಗಿದೆ. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ತಿಳಿಸಿದೆ.

ಈ ಸಲ ಹೇರೋಹಳ್ಳಿ ಕೆರೆಯಲ್ಲಿ ವಿಸರ್ಜನೆ ಇಲ್ಲ

ರಾಜರಾಜೇಶ್ವರಿ ನಗರದ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಈ ಬಾರಿ ತಾಂತ್ರಿಕ ಕಾರಣಗಳಿಂದ ಗಣೇಶ ವಿಸರ್ಜಿಸುವುದನ್ನು ಸ್ಥಗಿತಗೊಳಿಸಲಾಗಿದೆ.

ಯಡಿಯೂರು ಕೆರೆಯಲ್ಲಿ ವಿಸರ್ಜನೆಗೆ ವ್ಯವಸ್ಥೆ

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆ.27 ರಿಂದ ಸೆ.17ರ ವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

PREV
Read more Articles on

Recommended Stories

ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು