ಡೆಂಘೀ ನಿಯಂತ್ರಣಕ್ಕೆ ಬಿಬಿಎಂಪಿ ಸಿದ್ಧತೆ : ಜುಲೈ ತಿಂಗಳಲ್ಲಿಯೇ 442 ಪ್ರಕರಣ ಪತ್ತೆ

Published : Jul 29, 2025, 07:58 AM IST
Dengue Mosquito

ಸಾರಾಂಶ

ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ಲಾರ್ವಾ ಉತ್ಪತ್ತಿ ಸ್ಥಳಗಳನ್ನು ಪತ್ತೆ ಮಾಡಿ ನಾಶಪಡಿಸುವುದು ಮತ್ತು ಎಲ್ಲೆಡೆ ಔಷಧ ಸಿಂಪಡಣೆ ಮಾಡಸಲು ಕ್ರಮ ಕೈಗೊಳ್ಳಲಾಗುತ್ತಿದೆ.

 ಬೆಂಗಳೂರು :  ನಗರದಲ್ಲಿ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ಲಾರ್ವಾ ಉತ್ಪತ್ತಿ ಸ್ಥಳಗಳನ್ನು ಪತ್ತೆ ಮಾಡಿ ನಾಶಪಡಿಸುವುದು ಮತ್ತು ಎಲ್ಲೆಡೆ ಔಷಧ ಸಿಂಪಡಣೆ ಮಾಡಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ನಗರದಲ್ಲಿ ಕಳೆದ 2025ರ ಜನವರಿಯಿಂದ ಈವರೆಗೆ 1,685 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಜುಲೈ ತಿಂಗಳಲ್ಲಿಯೇ 442 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಕಳೆದೊಂದು ವಾರದಲ್ಲಿ 69 ಮಂದಿ ಡೆಂಘೀಗೆ ತುತ್ತಾಗಿದ್ದಾರೆ. ಹೀಗೆ ಡೆಂಘೀ ಪ್ರಕರಣ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ, ಡೆಂಘೀ ಹರಡುವ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸುವಂತೆ ವಾರ್ಡ್‌ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಸೂಚಿಸಿದ್ದಾರೆ. ಅಲ್ಲದೆ, ಲಾರ್ವಾ ಪತ್ತೆಯಾದಲ್ಲಿ ಅದನ್ನು ನಾಶ ಮಾಡುವುದು ಹಾಗೂ ನೀರು ನಿಲ್ಲುವ ಸ್ಥಳಗಳಲ್ಲಿ ಔಷಧ ಸಿಂಪಡಿಸುವಂತೆ ನಿರ್ದೇಶಿಸಿದ್ದಾರೆ.

ಜತೆಗೆ ಡೆಂಘೀ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವಯಂ ಸೇವಕರನ್ನು ನಿಯೋಜಿಸಬೇಕು. ಅವರುಗಳು ಮನೆಮನೆಗೆ ಭೇಟಿ ನೀಡಿ ಅರಿವು ಮೂಡಿಸಬೇಕು ಎಂದು ತಿಳಿಸಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸಲು ಪ್ರತಿ ಮನೆಗೆ ಒವಿ ಟ್ರ್ಯಾಪ್‌ಗಳನ್ನು ಅಳವಡಿಸಿಕೊಳ್ಳಲು ಜಾಗೃತಿ ಮೂಡಿಸಬೇಕು. ಹೆಚ್ಚು ಪ್ರಕರಣಗಳು ಕಂಡು ಬರುವ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ ಸೊಳ್ಳೆಗಳ ನಿಮೂಲನೆ ಮಾಡಬೇಕು. ನಿರಂತರವಾಗಿ ಫಾಗಿಂಗ್‌ ಮತ್ತು ಔಷಧ ಸಿಂಪಡಣೆ ಕಾರ್ಯ ನಡೆಸಬೇಕು. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ ಸಮನ್ವಯ ಸಾಧಿಸಿ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳನ್ನು ನಡೆಸುವ ಮೂಲಕ ಡೆಂಗೆ ಪ್ರಕರಣಗಳ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

PREV
Read more Articles on

Recommended Stories

ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಕಚ್ಚಿ ಸಾವು!
ಪೊಲೀಸರು ಶೋಷಿತರ ಮೇಲಿನ ದೌರ್ಜನ್ಯ ತಡೆಯಲಿ: ಸಿಎಂ