ಬೆಳಗಾವಿ : ನಗ್ನ ಚಿತ್ರ ವೈರಲ್‌ ಆಗುತ್ತದೆ ಎಂದು ಹೆದರಿ ವೃದ್ಧ ದಂಪತಿ ಆತ್ಮಹತ್ಯೆ

ಸಾರಾಂಶ

ಸೈಬರ್‌ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್‌ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

 ಬೆಳಗಾವಿ :  ಸೈಬರ್‌ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್‌ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್‌ (83) ಮತ್ತು ಪಾವಿಯಾ (79) ಮೃತ ದಂಪತಿ. 1 ತಿಂಗಳಿಂದ ಬೆದರಿಕೆ ಹಾಕುತ್ತಿದ್ದ ಸೈಬರ್‌ ಖದೀಮರ ಖಾತೆಗೆ ವೃದ್ಧ ದಂಪತಿ ₹6 ಲಕ್ಷ ವರ್ಗಾವಣೆ ಮಾಡಿದ್ದಾರೆ. ಆದರೂ ಖದೀಮರು ಮತ್ತೆ ಹಣ ನೀಡುವಂತೆ ಪೀಡಿಸಿದ್ದರಿಂದ ಬೇಸತ್ತು ನಿದ್ರೆ ಮಾತ್ರೆ ಸೇವಿಸಿ ಪಾವಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಇದರ ಬೆನ್ನಲ್ಲೇ ಪತಿ ಡಿಯಾಗೋ ಡೆತ್‌ ನೋಟ್‌ ಬರೆದಿಟ್ಟು ಚಾಕುವಿನಿಂದ ಕತ್ತು ಕೊಯ್ದುಕೊಂಡು ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ ನಂದಗಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article