ಬೆಂಗಳೂರು : ತುರ್ತು ನಿರ್ವಹಣೆ ಕಾಮಗಾರಿ - ಇಂದು, ನಾಳೆ ವಿದ್ಯುತ್‌ ವ್ಯತ್ಯಯ

Published : Jun 23, 2025, 07:35 AM IST
Golden opportunity for free electricity

ಸಾರಾಂಶ

ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು : ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಸೋಮವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಲಿಟ ಪ್ರೋಮೆನೇಡ್, ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಎಲಿಟ ಪ್ರೋಮೆನೇಡ್ ಅಪಾರ್ಟ್‌ಮೆಂಟ್‌, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ.ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಕೈಗಾರಿಕಾ ಪ್ರದೇಶ, ಕುಮಾರಸ್ವಾಮಿ ಬಡಾವಣೆ, ವಿಠ್ಠಲನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಾಳೆ ಎಲ್ಲೆಲ್ಲಿ?

ಮಂಗಳವಾರ ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ಎಚ್ ಬಿಆರ್ ಘಟಕ ವ್ಯಾಪ್ತಿಯ ಎಚ್ ಬಿಆರ್ ಲೇಔಟ್‌ನ 1,2,3,4 ಮತ್ತು 5ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ, ಸಿಎಂಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ನೇ ಬ್ಲಾಕ್, ಯಾಸಿನ್‌ನಗರ, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎಚ್.ಕೆ.ಬಿ.ಕೆ ಕಾಲೇಜ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಎ.ಕೆ.ಕಾಲೋನಿ, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ನಾಗೇನಹಳ್ಳಿ, ಪೊಲೀಸ್ ಕಾಲೋನಿ, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್‌, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಂ.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್‌ ಮತ್ತಿತರ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

PREV
Read more Articles on

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ