2029ಕ್ಕೆ ಬೆಂಗಳೂರು ಮೆಟ್ರೋ ಕಾಮಗಾರಿ ಪೂರ್ಣ : ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌

ಸಾರಾಂಶ

ಬೆಂಗಳೂರು ಮೆಟ್ರೋ ಯೋಜಿತ ಕಾಮಗಾರಿಗಳನ್ನು 2029ರ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಹೇಳಿದರು.

ಬೆಂಗಳೂರು: ಬೆಂಗಳೂರು ಮೆಟ್ರೋ ಯೋಜಿತ ಕಾಮಗಾರಿಗಳನ್ನು 2029ರ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಹೇಳಿದರು.

ಗಣರಾಜ್ಯೋತ್ಸವದಲ್ಲಿ ಭಾಷಣ ಮಾಡಿದ ಅವರು, ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-2ಎ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೃಷ್ಣರಾಜಪುರದವರೆಗೆ 19.75 ಕಿ.ಮೀ. ಮತ್ತು ಹಂತ 2ಬಿ ಕೆ.ಆರ್.ಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವರೆಗೆ 38.44 ಕಿ.ಮೀ.ಉದ್ದದ 14,788 ಕೋಟಿ ರು.ವೆಚ್ಚ ಕಾಮಗಾರಿ ಪ್ರಗತಿಯಲ್ಲಿದೆ. ಹಂತ-3 ಕಾರಿಡಾರ್-1 ಕೆಂಪಾಪುರದಿಂದ ಜೆ.ಪಿ.ನಗರ 4ನೇ ಹಂತದವರೆಗೆ 32.18 ಕಿ.ಮೀ, ಕಾರಿಡಾರ್-2 ಹೊಸಹಳ್ಳಿಯಿಂದ ಕಡಬಗೆರೆವರೆಗೆ 12.50ಕಿ.ಮೀ.ಒಟ್ಟು 44.65 ಕಿ.ಮೀ ಉದ್ದದ 15,611 ಕೋಟಿ ಅಂದಾಜು ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಲ್ಲ ಯೋಜನೆಗಳನ್ನು 2029ರ ಅಂತ್ಯಕ್ಕೆ ಪೂರ್ಣಗೊಳಿಸಲಾಗುತ್ತಿದೆ. ಹೀಗೆ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಭಾಷಣದಲ್ಲಿ ತಿಳಿಸಿದರು.

Share this article