ಜುಲೈನಲ್ಲಿ ಎಸ್ಸೆಮ್ಮೆಸ್‌, ಇ-ಮೇಲ್‌ ಮೂಲಕ ಸರಾಸರಿ ವಿದ್ಯುತ್‌ ಬಿಲ್‌: ಬೆಸ್ಕಾಂ

Published : Jul 09, 2026, 11:34 AM IST
Electricity

ಸಾರಾಂಶ

ಬೆಸ್ಕಾಂ ವ್ಯಾಪ್ತಿಯ ಮೀಟರ್‌ ರೀಡರ್‌ಗಳನ್ನು ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ನಿಯೋಜಿಸಿರುವ ಕಾರಣ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಹೀಗಾಗಿ ಗ್ರಾಹಕರಿಗೆ ಸರಾಸರಿ ಬಿಲ್‌ ನೀಡುವುದಾಗಿ ಬೆಸ್ಕಾಂ ತಿಳಿಸಿದೆ.

  ಬೆಂಗಳೂರು :  ಬೆಸ್ಕಾಂ ವ್ಯಾಪ್ತಿಯ ಮೀಟರ್‌ ರೀಡರ್‌ಗಳನ್ನು ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ನಿಯೋಜಿಸಿರುವ ಕಾರಣ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಹೀಗಾಗಿ ಗ್ರಾಹಕರಿಗೆ ಸರಾಸರಿ ಬಿಲ್‌ ನೀಡುವುದಾಗಿ ಬೆಸ್ಕಾಂ ತಿಳಿಸಿದೆ.

ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು. ಜುಲೈ ತಿಂಗಳ ಸರಾಸರಿ ಬಿಲ್‌ಗಳನ್ನು ಗ್ರಾಹಕರಿಗೆ ಎಸ್‌ಎಂಎಸ್‌ ಮತ್ತು ಇ-ಮೇಲ್ ಮೂಲಕ ಕಳುಹಿಸಲಾಗುವುದು. ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಎಂದಿನಂತೆ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆ ಆಧಾರದ ಮೇಲೆ ಬಿಲ್ ನೀಡಲಾಗುವುದು. ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯುನಿಟ್‌ಗಳನ್ನು, ನೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್‌ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಆದರೆ ಎಚ್.ಟಿ ಗ್ರಾಹಕರು, 40 ಎಚ್‌ಪಿ ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (ಎಲ್‌ಟಿ) ಗ್ರಾಹಕರು, ಸೋಲಾರ್ ರೂಫ್ಟಾಪ್ (ಎಸ್ಆರ್‌ಟಿಪಿವಿ) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಆಗಸ್ಟ್‌ನಿಂದ ಎಂದಿನಂತೆ ಬಿಲ್‌:

ಗ್ರಾಹಕರು ಜುಲೈ ಬಿಲ್ ನ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಪಾವತಿ ವಿಧಾನ ಎಂದರೆ ಉಪ ವಿಭಾಗದ ನಗದು ಕೌಂಟರ್ ಗಳು, ಬೆಸ್ಕಾಂ ವೆಬ್‌ಸೈಟ್‌, ಬೆಸ್ಕಾಂ ಮಿತ್ರ ಆ್ಯಪ್ ಹಾಗೂ ಥರ್ಡ್ ಪಾರ್ಟಿ ಆ್ಯಪ್‌ ಬಳಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

- ಗೃಹ ಜ್ಯೋತಿ ಪರಿಶೀಲನಾ ಕಾರ್ಯ ಹಿನ್ನೆಲೆ

- ಈ ತಿಂಗಳು ಬೆಸ್ಕಾಂನಿಂದ ಸರಾಸರಿ ಬಿಲ್‌

- ಮುಂದಿನ ತಿಂಗಳಿಂದ ಮಾಮೂಲಿನಂತೆ ಬಿಲ್‌

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗಳೂರಲ್ಲಿ 8ನೇ ದಿನ 42 ಕಿ.ಮೀ. ಫುಟ್ಪಾತ್‌ ಒತ್ತುವರಿ ತೆರವು
ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು