ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.
ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.
ರಾಜಕೀಯ ಮುಖಂಡರು ಹಾಗೂ ಅನೇಕ ಗಣ್ಯರು ಹಾಜರಾಗಿ ಶುಭ ಕೋರಿದರು. ಚೆನ್ನೈ ಮೂಲದ ಶಿವಶ್ರೀ ಅವರು ಶಾಸ್ತ್ರೀಯ ಹಾಗೂ ಭಕ್ತಿ ಸಂಗೀತ ಗಾಯಕಿ ಆಗಿದ್ದು ದೇಶವ್ಯಾಪಿ ಹೆಸರು ಮಾಡಿದ್ದಾರೆ. ನವದಂಪತಿಯ ವಿವಾಹ ಆರತಕ್ಷತೆ ಭಾನುವಾರ ನೆರವೇರಲಿದೆ.