ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ.
ಬೆಂಗಳೂರು : ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸೋಮವಾರ ಪಕ್ಷದ ಕಚೇರಿ ಬಳಿ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ಬಳಿಕ ಕರಂದ್ಲಾಜೆ ಅವರು ಮಲ್ಲೇಶ್ವರದಲ್ಲಿ ಕೆಲಕಾಲ ಖುದ್ದಾಗಿ ಪಕ್ಷದ ಇತರ ಮುಖಂಡರೊಂದಿಗೆ ಬೀದಿಗಳಲ್ಲಿ ಸಂಚರಿಸಿ ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಕೂಡಲೇ ತೆರವು ಮಾಡುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸುವ ಮನವಿ ಪತ್ರಕ್ಕೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿಯ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಮಾತನಾಡಿ, ಬಿಜೆಪಿ ರಾಜ್ಯ ಸರ್ಕಾರ ಇರುವಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲೂ ಕೂಡ ಪ್ರತಿ ಜಿಲ್ಲೆಯಲ್ಲಿ ನೂರಾರು ಪಾಕಿಸ್ತಾನಿ ನಿವಾಸಿಗಳಿದ್ದಾರೆ ಎಂದು ತಿಳಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ್ ಖಾಸಲೆ ಮತ್ತಿತರರು ಉಪಸ್ಥಿತರಿದ್ದರು.