ಬೋರ್ಡ್ ಪರೀಕ್ಷೆ ಅಧಿಸೂಚನೆ ಹಿಂದಕ್ಕೆ : ಸುಪ್ರೀಂ ಕೋರ್ಟಿಗೆ ರಾಜ್ಯ ಸರ್ಕಾರ ಮಾಹಿತಿ

Published : Oct 16, 2024, 11:08 AM IST
Maharashtra MPSC Group B C services Exam 2024 Registration

ಸಾರಾಂಶ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೆಲ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನವದೆಹಲಿ : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೆಲ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಾ.6ರಂದು ನೀಡಿದ ಆದೇಶ ರದ್ದುಗೊಳಿಸಿ 2023-24ನೇ ಶೈಕ್ಷಣಿಕ ವರ್ಷಕ್ಕೆ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ನ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು. ಇದರ ವಿರುದ್ಧ ಅನುದಾನರಹಿತ ನೋಂದಾಯಿತ ಶಾಲೆಗಳ ಒಕ್ಕೂಟ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ವಿಚಾರಣೆ ನಡೆಸಿದೆ.

ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಸರ್ಕಾರದ ಅಧಿಸೂಚನೆಯನ್ನು ಹಿಂಪಡೆಯಲಾಗಿದ್ದು, ಪರೀಕ್ಷೆ ನಡೆಸಿದರೂ ಫಲಿತಾಂಶ ಪ್ರಕಟಿಸಿಲ್ಲ ಎಂದು ಮಾಹಿತಿ ನೀಡಿದರು.

ಪಾಲಕರು ಮತ್ತು ಮಕ್ಕಳಿಗೆ ತೊಂದರೆ ಕೊಡಲು ರಾಜ್ಯ ಸರ್ಕಾರ ಏಕೆ ಮುಂದಾಗಿದೆ ಎಂದು ಪೀಠ ಪ್ರಶ್ನಿಸಿತು. ಆಗ ಮೆಹ್ತಾ ಅವರು, ಕೆಲ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಪಡೆದ ಸರಾಸರಿ ಅಂಕಗಳು 50ಕ್ಕಿಂತ ಕಡಿಮೆ ಇರುವುದರಿಂದ ಪರೀಕ್ಷೆ ನಡೆಸಲಾಗಿತ್ತು ಎಂದು ಕೋರ್ಟ್‌ಗೆ ಸ್ಪಷ್ಟನೆ ನೀಡಿದರು. ವಾದ ಆಲಿಸಿದ ಪೀಠವು ಒಂದು ವಾರದ ಬಳಿಕ ವಿಚಾರಣೆ ಮುಂದೂಡಿದೆ.

PREV

Recommended Stories

ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ
ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್‌