ಹೈಕೋರ್ಟ್ ಆದೇಶದಂತೆ ಉಬರ್ ಇಂಡಿಯಾ ಸಿಸ್ಟಂ ಸೇರಿ ಇನ್ನಿತರ ಆ್ಯಪ್ ಆಧಾರಿತ ಸಂಸ್ಥೆಗಳಿಂದ ನೀಡಲಾಗುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಬೆಂಗಳೂರು : ಹೈಕೋರ್ಟ್ ಆದೇಶದಂತೆ ಉಬರ್ ಇಂಡಿಯಾ ಸಿಸ್ಟಂ ಸೇರಿ ಇನ್ನಿತರ ಆ್ಯಪ್ ಆಧಾರಿತ ಸಂಸ್ಥೆಗಳಿಂದ ನೀಡಲಾಗುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಬೈಕ್ ಟ್ಯಾಕ್ಸಿ ಸೇವೆ ರದ್ದತಿಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿದ್ದ ಅರ್ಜಿ ವಿಚಾರಣೆ ನಡೆಸಿ, ಉಬರ್ ಇಂಡಿಯಾ ಸಿಸ್ಟಂ, ರೊಪ್ಪನ್ ಟ್ರಾನ್ಸ್‌ಪೋರ್ಟೇಷನ್ ಸರ್ವೀಸ್, ಎಎನ್‌ಐ ಟೆಕ್ನಾಲಜೀಸ್ ಮೂಲಕ ನಡೆಸಲಾಗುತ್ತಿರುವ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಏ.2ರಂದು ಆದೇಶಿಸಲಾಗಿತ್ತು.
ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ 6 ವಾರಗಳ ಗಡುವನ್ನೂ ವಿಧಿಸಲಾಗಿತ್ತು. ಅದಕ್ಕೆ ಸಂಬಂಧಿಸಿ ಸಾರಿಗೆ ಇಲಾಖೆ ಅಧಿಕಾರಿಗಳು ಈವರೆಗೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಕ್ಕೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಹೈಕೋರ್ಟ್ ಆದೇಶದಂತೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.