ರಾಮುಲು-ರೆಡ್ಡಿ ಕಿತ್ತಾಟ ಮಧ್ಯೆಯೇ ಬಿವೈವಿ ದಿಲ್ಲಿಗೆ - ರಾಜಕೀಯ ವಲಯದಲ್ಲಿ ಕುತೂಹಲ

ಸಾರಾಂಶ

ಮಾಜಿ ಸಚಿವರಾದ ಬಿ.ಶ್ರೀರಾಮುಲು ಮತ್ತು ಗಾಲಿ ಜನಾರ್ದನರೆಡ್ಡಿ ನಡುವೆ ವಾಕ್ಸಮರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ದೆಹಲಿಗೆ ದಿಢೀರ್‌ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.

 ಬೆಂಗಳೂರು : ಮಾಜಿ ಸಚಿವರಾದ ಬಿ.ಶ್ರೀರಾಮುಲು ಮತ್ತು ಗಾಲಿ ಜನಾರ್ದನರೆಡ್ಡಿ ನಡುವೆ ವಾಕ್ಸಮರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ದೆಹಲಿಗೆ ದಿಢೀರ್‌ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.

ಶ್ರೀರಾಮಲು ಮತ್ತು ರೆಡ್ಡಿ ನಡುವಿನ ಬಹಿರಂಗ ಸಮರದ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಬಿರುಸಿನ ಚರ್ಚೆ ನಡೆದಿದ್ದು, ಯಾವುದೇ ಕಾರಣಕ್ಕೂ ಶ್ರೀರಾಮುಲು ಅವರು ಪಕ್ಷ ತೊರೆಯದಂತೆ ಎಚ್ಚರಿಕೆ ವಹಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದರ ಮಧ್ಯೆಯೇ ವಿಜಯೇಂದ್ರ ಅವರು ದೆಹಲಿಗೆ ತೆರಳಿದ್ದು ಸಹಜವಾಗಿಯೇ ಕುತೂಹಲಕ್ಕೆ ಕಾರಣವಾಗಿದೆ.

ಆದರೆ, ವಿಜಯೇಂದ್ರ ಅವರು ಖಾಸಗಿ ಕೆಲಸ ನಿಮಿತ್ತ ದೆಹಲಿಗೆ ತೆರಳಿದ್ದಾರೆ ಹೊರತು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಅವರು ಪಕ್ಷದ ಯಾವುದೇ ರಾಷ್ಟ್ರೀಯ ನಾಯಕರನ್ನೂ ಭೇಟಿ ಮಾಡಿಲ್ಲ. ಶನಿವಾರ ಬೆಂಗಳೂರಿಗೆ ವಾಪಸಾಗುತ್ತಾರೆ ಎಂದು ಅವರ ಆಪ್ತರು ಸ್ಪಷ್ಟನೆ ನೀಡಿದ್ದಾರೆ.

Share this article