ಬೆಂಗಳೂರು : ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ 65 ಕೋಟಿ ರು. ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಭೂಮಿ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಮನಗರದಲ್ಲಿ ರಾಜೀವ್‌ಗಾಂಧಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮಂಜೂರಾತಿ ನೀಡಿತ್ತು. ಬಳಿಕ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಯಿತು.
ಆಗ ಡಿ.ಕೆ.ಶಿವಕುಮಾರ್ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಿಯೇ ಸ್ಥಾಪಿಸುತ್ತೇನೆ ಎಂದು ಶಪಥಗೈದಿದ್ದರು. ಇದೀಗ ಅದರಲ್ಲಿ ಯಶಸ್ವಿಯಾಗಿದ್ದು, ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆಯ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಅಧಿಕೃತ ಚಾಲನೆ ನೀಡಲಾಗುತ್ತಿದೆ. ಅದಕ್ಕೆ ಸಂಬಂಧಿಸಿ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಭೂಮಿ ಖರೀದಿಸಲು ಕರ್ನಾಟಕ ಗೃಹ ಮಂಡಳಿಯಿಂದ ಭೂಮಿ ಖರೀದಿಗೆ 65 ಕೋಟಿ ರು. ನೀಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.