ಸಿಎಂ ಕಾವೇರಿ ನಿವಾಸಕ್ಕೆ ಸ್ಟಿಕ್ಕರ್ ಅಂಟಿಸಿದ ಹಿಂ.ವರ್ಗಗಳ ಆಯೋಗ

Published : Sep 06, 2025, 09:55 AM IST
Siddaramaiah

ಸಾರಾಂಶ

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ಸಮೀಕ್ಷೆಗೆ ಮನೆ ಪಟ್ಟಿ ಮಾಡಿರುವ ಸ್ಟಿಕ್ಕರ್‌ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಅಂಟಿಸಲಾಯಿತು.

  ಬೆಂಗಳೂರು :  ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ಸಮೀಕ್ಷೆಗೆ ಮನೆ ಪಟ್ಟಿ ಮಾಡಿರುವ ಸ್ಟಿಕ್ಕರ್‌ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಅಂಟಿಸಲಾಯಿತು.

ಸೆ.22 ರಿಂದ ಮನೆ-ಮನೆ ಸಮೀಕ್ಷೆ ಶುರುವಾಗಲಿದೆ. ಇದಕ್ಕೂ ಮೊದಲು ಸಮೀಕ್ಷೆಗೆ ಗುರುತಿಸಿ ಪಟ್ಟಿ ಮಾಡಿರುವ ಮನೆಗಳಿಗೆ ವಿದ್ಯುತ್‌ ಸಂಪರ್ಕದ ಆಧಾರದ ಮೇಲೆ ಸ್ಟಿಕ್ಕರ್‌ ಅಂಟಿಸುವ ಕಾರ್ಯ ಶುರುವಾಗಿದೆ.

ಈ ಹಿನ್ನೆಲೆಯಲ್ಲಿ ಸಮೀಕ್ಷೆ ಕಾರ್ಯದ ಮೊದಲ ಭಾಗವಾಗಿ ಮನೆ ಪಟ್ಟಿ (ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್) ಕಾರ್ಯ ಶುರುವಾಗಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಟಿಕ್ಕರ್‌ ನೀಡಿದ ಹಿಂದುಳಿದ ವರ್ಗಗಳ ಆಯೊಗದ ಸಿಬ್ಬಂದಿಯು ಬಳಿಕ ಕಾವೇರಿ ನಿವಾಸಕ್ಕೆ ಸ್ಟಿಕ್ಕರ್‌ ಅಂಟಿಸಿದರು.

ಸಹಾಯವಾಣಿ ಸಂಖ್ಯೆ: 8050770094

ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿ ಮಾಡಬೇಕು ಎಂದು ಕೋರುತ್ತೇನೆ.

-ಸಿದ್ದರಾಮಯ್ಯ, ಮುಖ್ಯಮಂತ್ರಿ.

PREV
Read more Articles on

Recommended Stories

ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ
ಉಪನಗರ ರೈಲು ಯೋಜನೆಗೆ ಗ್ರಹಣ - ಪ್ರಧಾನಿ ಗಡುವು ಇಂದು ಮುಕ್ತಾಯ