ದಸರಾಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ : ಡಿಕೆಶಿ

Published : Apr 26, 2025, 11:41 AM IST
DK Shivakumar

ಸಾರಾಂಶ

ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

 ಮಂಡ್ಯ :  ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿರುವ ಅತಿಥಿಗೃಹದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ ಆರತಿಗೆ ಸಚಿವ ಸಂಪುಟ ಸಭೆಯಲ್ಲಿ ೯೨ ಕೋಟಿ ರು. ಮಂಜೂರಾಗಿದೆ. ಕಾವೇರಿ ನೀರು ಅವಲಂಬಿಸಿರುವ ಎಲ್ಲಾ ಜನರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಕೇರಳ, ತಮಿಳುನಾಡು ಜನರು ಬಂದು ಪೂಜೆ ಸಲ್ಲಿಸಬಹುದು ಎಂದರು.

ಕಾವೇರಿ ಆರತಿ ಹೇಗಿರಬೇಕು, ಯಾವ ಸ್ಥಳದಲ್ಲಿ ನಡೆಯಬೇಕು ಎಂಬ ಬಗ್ಗೆ ಸಲಹೆ ನೀಡಲು ಇಲ್ಲಿಗೆ ಬಂದಿದ್ದೇನೆ. ಅದಕ್ಕಾಗಿ ಇಬ್ಬರು ಜಿಲ್ಲಾಧಿಕಾರಿಗಳನ್ನು ಒಳಗೊಂಡಂತೆ ಅಧಿಕಾರಿಗಳ ಸಮಿತಿ ರಚನೆ ಮಾಡಿದ್ದೇನೆ. ಕಾವೇರಿ ಆರತಿಗೆ ಬರುವ ಜನರಿಗೆ ಒಂದು ಉಚಿತ ಪ್ರವೇಶ ಹಾಗೂ ಟಿಕೆಟ್ ಪಡೆದು ಪ್ರವೇಶ ನೀಡಲು ನಿರ್ಧರಿಸಲಾಗಿದೆ. ಹತ್ತು ಸಾವಿರ ಜನರು ಒಂದೇ ಕಡೆ ಕುಳಿತು ಕಾವೇರಿ ಆರತಿ ನೋಡುವಂತೆ ವ್ಯವಸ್ಥೆ ಮಾಡುತ್ತಿದ್ದೇವೆ. ವಾರದಲ್ಲಿ ಎಷ್ಟು ಬಾರಿ ಆರತಿ ನಡೆಯಬೇಕು ಎಂಬುದನ್ನು ಮುಂದೆ ತೀರ್ಮಾನಿಸುತ್ತೇವೆ. ಇದರಿಂದ ಬಂದ ಹಣವನ್ನ ನಾವು ಪಂಚಾಯಿತಿ ಅಭಿವೃದ್ಧಿಗೆ ಬಳಸುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ, ಕೃಷ್ಣರಾಜಸಾಗರ ಜಲಾಶಯದ ಬೋಟಿಂಗ್ ಪಾಯಿಂಟ್ ಬಳಿ ಕಾವೇರಿ ಆರತಿ ನಡೆಸಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ.

ಮೈಸೂರು ದಸರಾಗೆ ಕಂಬಳ ಸೇರ್ಪಡೆ: ಡಿಕೆಶಿ

ಮಂಡ್ಯ: ಈ ಬಾರಿ ನಾಡಹಬ್ಬ ದಸರಾವನ್ನು ವಿನೂತನವಾಗಿ ಆಚರಿಸಲು ಚರ್ಚೆ ನಡೆಸಲಾಗಿದೆ. ಜೊತೆಗೆ ಪ್ರಥಮ ಬಾರಿಗೆ ಕಂಬಳವನ್ನು ದಸರಾದಲ್ಲಿ ಸೇರಿಸಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಕೆಆರ್‌ಎಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾದಲ್ಲಿ ಒಂದಷ್ಟು ಹಳೆಯ ಪದ್ಧತಿಗಳನ್ನು ಕೈಬಿಟ್ಟು ಹೊಸ ಪೀಳಿಗೆಯನ್ನು ಆಕರ್ಷಿಸುವಂತಹ ಕಾರ್ಯಕ್ರಮಗಳ ಆಯೋಜನೆಗೆ ಚರ್ಚೆ ನಡೆಸಲಾಗಿದೆ. ಶೀಘ್ರ ಸಭೆ ನಡೆಸೋಣ ಎಂದು ಸಿಎಂ ಹೇಳಿದ್ದಾರೆ ಎಂದರು.

ಎಂದಿದ್ದಾರೆ. ಕಂಬಳ ನಮ್ಮ ರಾಜ್ಯದ ಕರಾವಳಿ ಭಾಗದ ವಿಶೇಷ ಆಚರಣೆ. ಹೀಗಾಗಿ ಕಂಬಳವನ್ನು ದಸರಾದಲ್ಲಿ ಸೇರಿಸಲಾಗುವುದು. ಇದಕ್ಕೆ ಸ್ಥಳ ಹುಡುಕುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?