ಪ್ರಿಯಾಂಕ್‌ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರದ ಬ್ರೇಕ್‌

Sujatha NR | Published : Jun 18, 2025 5:01 AM

‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ

 ಬೆಂಗಳೂರು :  ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ ‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದ್ದು, ಈ ಬಗ್ಗೆ ಬೆಂಗಳೂರಿಗೆ ವಾಪಸಾದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ಯಾರಿಸ್‌ನಲ್ಲಿರುವ ಪ್ರಿಯಾಂಕ್‌ ಖರ್ಗೆ ಅವರು ಜೂ.16 ರಿಂದ 19ರವರೆಗೆ ಬಾಸ್ಟನ್‌ನಲ್ಲಿ ನಡೆಯುತ್ತಿದ್ದ ಬಯೋ-2025 ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಿತ್ತು. ರಾಜ್ಯ ಐಟಿ-ಬಿಟಿ ಇಲಾಖೆಯ ಅಧಿಕಾರಿಗಳು ಈಗಾಗಲೇ ಬಾಸ್ಟನ್‌ ಸೇರಿಕೊಂಡಿದ್ದರು. ಆದರೆ ಪ್ರಿಯಾಂಕ್‌ ಖರ್ಗೆ ಅವರಿಗೆ ಬಾಸ್ಟನ್‌ಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ ಎನ್ನಲಾಗಿದೆ.

ಈ ಬಗ್ಗೆ ಎಕ್ಸ್‌ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್‌ ಖರ್ಗೆ, ‘ಅನುಮತಿ ನಿರಾಕರಣೆ ಬಗ್ಗೆ ಸದ್ಯಕ್ಕೆ ಯಾವುದೇ ಬಹಿರಂಗ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ನಾನು ಬೆಂಗಳೂರಿಗೆ ಹಿಂತಿರುಗಿದ ನಂತರ, ಅನುಮತಿ ನಿರಾಕರಣೆಯ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ವಿವರಣೆ ಪಡೆದು ಬಳಿಕ ಮಾತನಾಡುತ್ತೇನೆ’ ಎಂದು ಹೇಳಿದ್ದಾರೆ.

  • ಪ್ರಿಯಾಂಕ್‌ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರದ ಬ್ರೇಕ್‌
  • ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ
  • -ಬಯೋ-2025’ ಸಮಾವೇಶಕ್ಕೆ ಹೊರಟಿದ್ದ ಸಚಿವ
  • -ಕೇಂದ್ರದಿಂದ ವಿವರಣೆ ಕೇಳುತ್ತೇನೆ: ಪ್ರಿಯಾಂಕ್‌

Read more Articles on