ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ(ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ.
ಬೆಂಗಳೂರು : ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ(ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಆಯೋಜಿಸಿರುವ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶವನ್ನು https://cetonline.Karnataka.gov.in/ugcetrank2025/checkresult.aspx ಹಾಗೂ https://karresults.nic.in ನಲ್ಲಿ ವೀಕ್ಷಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ಏ.16 ಮತ್ತು 17ರಂದು ನಡೆಸಲಾಗಿದ್ದ ಈ ಬಾರಿಯ ಸಿಇಟಿ ಪರೀಕ್ಷೆಗೆ ಒಟ್ಟು 3.11 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.