ಕರೆ ಒತ್ತುವರಿ ತೆರವು ಪೂರ್ಣ ಆಗದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

Published : May 31, 2025, 12:57 PM IST
Karnataka Chief Minister Siddaramaiah (File Photo/ANI)

ಸಾರಾಂಶ

ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ.

  ಬೆಂಗಳೂರು : ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಶುಕ್ರವಾರ ನಡೆದ ಸಭೆಯಲ್ಲಿ ಕೆರೆ ಒತ್ತುವರಿ ತೆರವಿಗೆ ಅಗತ್ಯ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಿಎಂ ಸಮಯ ಪಾಲನೆ ಕಂಡು

ಸಚಿವರು, ಅಧಿಕಾರಿಗಳು ಕಕ್ಕಾಬಿಕ್ಕಿ!

ಶುಕ್ರವಾರ ಸಭೆ ವೇಳೆ ಮಧ್ಯಾಹ್ನ ಭೋಜನ ವಿರಾಮಕ್ಕೆ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯೆಲ್‌ ಅವರು 45 ನಿಮಿಷ ಸಮಯ ಪ್ರಕಟಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 30 ನಿಮಿಷ ಸಾಕು ಎಂದು ಸ್ಪಷ್ಟಪಡಿಸಿದರು.

ಭೋಜನ ವಿರಾಮ ಬಳಿಕ ಕರಾರುವಕ್ಕಾಗಿ 30 ನಿಮಿಷಕ್ಕೆ ಮತ್ತೆ ಸಿದ್ದರಾಮಯ್ಯ ಸಭೆಗೆ ವಾಪಸ್ಸಾದರು. 30 ನಿಮಿಷಕ್ಕೆ ಸರಿಯಾಗಿ ಆಗಮಿಸುತ್ತಾರೆ ಎಂಬ ಅಂದಾಜಿಲ್ಲದೆ ಆರಾಮವಾಗಿ ಊಟ ಮಾಡುತ್ತಿದ್ದ ಸಚಿವರು ಹಾಗೂ ಅಧಿಕಾರಿಗಳು ಊಟ ಅರ್ಧಕ್ಕೆ ಬಿಟ್ಟು ಸಭೆಗೆ ದೌಡಾಯಿಸಿದರು.

PREV
Read more Articles on

Recommended Stories

ಆಡಂಬರದ ಮದುವೆಗೆ ಅವಕಾಶ ಕೊಡಬೇಡಿ: ಶ್ರೀ
ಕುಂದುಕೊರತೆ ಸಭೆಯಲ್ಲಿ ಅಕ್ರಮ ಮದ್ಯ ಮಾರಾಟದ್ದೇ ಸದ್ದು