ಸಚಿವ ರಾಜಣ್ಣ ಹನಿಟ್ರ್ಯಾಪ್‌ ಕೇಸ್‌ ಅಂತಿಮ ವರದಿಗೆ ಸಿಐಡಿ ಸಿದ್ದತೆ

Published : May 30, 2025, 07:01 AM IST
KN Rajanna Honeytrap

ಸಾರಾಂಶ

ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್‌.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್‌ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.

ಬೆಂಗಳೂರು : ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್‌.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್‌ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.

ಈ ಸಂಬಂಧ ಸಿಐಡಿ ಡಿಜಿಪಿ ಆಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಪ್ರಭಾರ) ಡಾ.ಎಂ.ಎ.ಸಲೀಂ ಅವರೊಂದಿಗೆ ವಿಚಾರಣಾ ತಂಡದ ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. ಈ ವಿಚಾರಣಾ ವರದಿ ಬಗ್ಗೆ ಸಲೀಂ ಅವರ ಪರಾಮರ್ಶೆ ಬಳಿ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಮೂಲಗಳು ಹೇಳಿವೆ.

ಸಹಕಾರ ಸಚಿವರಿಗೆ ಹನಿಟ್ರ್ಯಾಪ್ ಯತ್ನ ಆರೋಪ ಕುರಿತ ವಿಚಾರಣೆ ನಡೆದಿದ್ದು, ಇನ್ನು ಅಂತಿಮ ವರದಿ ಸಲ್ಲಿಕೆಯಾಗಿಲ್ಲ. ಈ ಬಗ್ಗೆ ಡಿಜಿ-ಐಜಿಪಿ ಅವರ ನಿರ್ದೇಶನ ಬಳಿಕ ಮುಂದುವರೆಯುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಅಧಿವೇಶನ ವೇಳೆ ತಮಗೆ ಹನಿಟ್ರ್ಯಾಪ್‌ ಯತ್ನ ನಡೆದಿತ್ತು ಎಂದು ಸಚಿವ ರಾಜಣ್ಣ ಸ್ಫೋಟಕ ಹೇಳಿಕೆ ಕೊಟ್ಟಿದ್ದರು. ತರುವಾಯ ಈ ಬಗ್ಗೆ ವಿಚಾರಣೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ಅವರು ಮನವಿ ಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಸಿಐಡಿಗೆ ಸರ್ಕಾರ ಸೂಚಿಸಿತ್ತು. ಆದರೆ ವಿಚಾರಣೆ ವೇಳೆ ಆರೋಪಕ್ಕೆ ಪೂರಕವಾದ ಪುರಾವೆಗಳು ಸಿಐಡಿಗೆ ಲಭ್ಯವಾಗದೆ ಪ್ರಕರಣ ಸವಾಲಾಗಿತ್ತು. ಅಲ್ಲದೆ, ತಮ್ಮ ಆರೋಪಕ್ಕೆ ಸಚಿವ ರಾಜಣ್ಣ ಕೂಡ ವಿಚಾರಣೆ ನಡೆಸಿದಾಗ ಸ್ಪಷ್ಟ ಮಾಹಿತಿ ನೀಡಲಿಲ್ಲ. ಹೀಗಾಗಿ ಸಾಕ್ಷ್ಯಾಧಾರ ಕೊರತೆ ಮುಂದಿಟ್ಟು ವಿಚಾರಣೆಗೆ ಶುಭಂ ಹೇಳಲು ಸಿಐಡಿ ಮುಂದಾಗಿದೆ ಎಂದು ತಿಳಿದು ಬಂದಿದೆ.

PREV
Read more Articles on

Recommended Stories

ನನ್ನ ಬಗ್ಗೆ ಮಾತನಾಡುವವರಿಗೆ ಸಿಗಂದೂರು ಚೌಡೇಶ್ವರಿ ತಕ್ಕ ಬುದ್ಧಿ ಕಲಿಸಲಿದ್ದಾಳೆ : ಮಧು ಬಂಗಾರಪ್ಪ
ಮಕ್ಕಳ ಕುಬ್ಜ ಬೆಳವಣಿಗೆ: 2 ಜಿಲ್ಲೆಯ ಸ್ಥಿತಿ ಕಳವಳ