;Resize=(412,232))
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ಮೈ ಕೊರೆಯುವ ಚಳಿಯ ವಾತಾವರಣವಿತ್ತು. ಇದೀಗ ಹಿಂಗಾರು ಮಾರುತಗಳು ಚುರುಕುಗೊಂಡಿದ್ದು, ಬಂಗಾಳ ಕೊಲ್ಲಿಯ ಕಡೆಯಿಂದ ಬೀಸುತ್ತಿವೆ. ಹೀಗಾಗಿ, ಮಳೆಯ ವಾತಾವರಣ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬಂದಿತ್ತು.
ಇನ್ನೂ ಎರಡು ದಿನ ಇದೇ ವಾತಾವರಣ ಇರಲಿದೆ. ಆ ಬಳಿಕ ಸಾಮಾನ್ಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೋಡ ಕವಿದ ವಾತಾವರಣದ ಹಿನ್ನೆಲೆಯಲ್ಲಿ ಹಗಲು ವೇಳೆ ಸ್ವಲ್ಪ ಚಳಿಯ ವಾತಾವರಣ ಇರಲಿದೆ. ಆದರೆ, ರಾತ್ರಿ ವೇಳೆ ಚಳಿ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.