ಸಸ್ಪೆಂಡ್‌ ಆದ ಮೈಸೂರಿನ ಕಾನ್‌ಸ್ಟೇಬಲ್‌ ಸಲೀಂ ಪಾಷಾಗೆ ಸಿಎಂ ಪದಕ: ವಿಜಯೇಂದ್ರ ಆಕ್ರೋಶ

Published : Aug 16, 2024, 01:31 PM ISTUpdated : Aug 16, 2024, 01:32 PM IST
BY vijayendraa

ಸಾರಾಂಶ

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್‌ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು :  ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೊಡಮಾಡುವ ‘ಮುಖ್ಯಮಂತ್ರಿಗಳ ಪದಕ’ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್‌ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಪೇದೆ ಅಮಾನತು ಆದೇಶದ ಪ್ರತಿಯನ್ನು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡು ಪೋಸ್ಟ್‌ ಹಾಕಿರುವ ವಿಜಯೇಂದ್ರ, ಕೆಲ ನಾಮಧೇಯಗಳನ್ನು ಕಂಡರೆ ಈ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕಳ್ಳರಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೊಡಮಾಡುವ ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ ಎಂದು ಕಿಡಿಕಾರಿದ್ದಾರೆ.

ಸಲೀಂ ಪಾಷಾ ಎಂಬ ಪೇದೆ ಪದಕ ಪಟ್ಟಿಗೆ ಸೇರ್ಪಡೆಗೊಂಡ ಅದೃಷ್ಟವಂತ. ಅಪರಾಧಿಗಳೊಂದಿಗೆ ಕೈಜೋಡಿಸಿ ಕಳ್ಳತನಗಳಿಗೆ ನೆರವಾಗುತ್ತಿದ್ದ ಹಾಗೂ ಇಲಾಖೆಯ ದಾಖಲೆಗಳನ್ನು ಸೋರಿಕೆ ಮಾಡುವ ವಿದ್ರೋಹ ಕೃತ್ಯದ ಆರೋಪದ ಮೇಲೆ ಅಮಾನತಾಗಿರುವುದೇ ಈತನ ಅರ್ಹತೆಯಾಗಿರುವಂತಿದೆ. ಸಮಾಜಘಾತುಕತನ ಹಾಗೂ ದೇಶದ್ರೋಹಿ ಮನಸ್ಥಿತಿಯ ಪೊಲೀಸ್ ಪೇದೆಯೊಬ್ಬರ ಹೆಸರು ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಪ್ರಕಟವಾಗಿರುವುದು ಗೃಹ ಇಲಾಖೆ ಅಧಃಪತನಕ್ಕೆ ನಿದರ್ಶನವಾಗಿದೆ ಎಂದು ಟೀಕಿಸಿದ್ದಾರೆ.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...