ಮೈಶುಗರ್‌ ವಿದ್ಯುತ್‌ ಬಿಲ್‌ ಮನ್ನಾ ಕಡತಕ್ಕೆ ಸಿಎಂ ಸೂಚನೆ

ಸಾರಾಂಶ

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ ಕಡತ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದ್ದಾರೆ.

ಬೆಂಗಳೂರು :  ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ ಕಡತ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ದಿನೇಶ ಗೂಳಿಗೌಡ ಅವರು ಮೈಶುಗರ್ ಸಕ್ಕರೆ ಕಾರ್ಖಾನೆಯ ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಮಾಡಿರುವ ಮನವಿಗೆ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ತರುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಮಂಡ್ಯ ಮೈ ಶುಗರ್ ಕಾರ್ಖಾನೆ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. ಹೀಗಾಗಿ 52.25 ಕೋಟಿ ರು. ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯು ಮೈಶುಗರ್ ಸಕ್ಕರೆ ಕಾರ್ಖಾನೆಗೆ ನೋಟಿಸ್ ನೀಡಿತ್ತು‌. ರೈತರ ಹಿತ ದೃಷ್ಟಿಯಿಂದ‌ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ವಿಧಾನಪರಿಷತ್‌ ಸದಸ್ಯ ದಿನೇಶ ಗೂಳಿಗೌಡ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

\Bಮನವಿ ಪತ್ರದಲ್ಲೇನಿತ್ತು?:\B

ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ಫ್ಯಾಕ್ಟರಿ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಅಷ್ಟು ಹಣ ವಿದ್ಯುತ್‌ ಬಿಲ್‌ಗೆ ಪಾವತಿಸಿದರೆ ಈ ಹಂಗಾಮಿನಲ್ಲಿ ಕಬ್ಬು ನುರಿಸುವುದೇ ಕಷ್ಟವಾಗಬಹುದು. ಹೀಗಾಗಿ ಬಿಲ್ ಮನ್ನಾ ಮಾಡಬೇಕು ಎಂದು ಗೂಳಿಗೌಡ ಮನವಿ ಪತ್ರದಲ್ಲಿ ಕೋರಿದ್ದರು.

Share this article